ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಡಾ.ಬಾಬು ಜಗಜೀವನರಾಂರವರ 37 ನೇ ಪುಣ್ಯಸ್ಮರಣೆ 

2 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.06) : ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗ ಭಾರತದಲ್ಲಿದ್ದ 33 ಕೋಟಿ ಜನರಿಗೆ ಹೊಟ್ಟೆ ತುಂಬುವಷ್ಟು ಆಹಾರ ನೀಡಲು ನಮ್ಮಲ್ಲಿ ಧಾನ್ಯ ಇರಲಿಲ್ಲ. ಅಂತಹ ಕಷ್ಟದ ಸಂದರ್ಭದಲ್ಲಿ ಅಮೇರಿಕಾದಿಂದ ಕೆಂಪು ಜೋಳ ಹಾಗೂ ಗೋಧಿ ತರಿಸಿಕೊಂಡು ಬಡವರಿಗೆ ವಿತರಿಸಿದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂರವರಲ್ಲಿ ದೂರದೃಷ್ಟಿಯಿತ್ತು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಡಾ.ಬಾಬು ಜಗಜೀವನರಾಂರವರ 37 ನೇ ಪುಣ್ಯಸ್ಮರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಪುಣ್ಯಸ್ಮರಣೆ ಆಚರಿಸುತ್ತಿರುವುದು ನಮ್ಮೆಲ್ಲರ ಪುಣ್ಯ. ದೇಶದ ಅಭಿವೃದ್ದಿಗೆ ಅವರ ಕೊಡುಗೆ ಅಪಾರ. ಪಾರ್ಲಿಮೆಂಟ್ ಸದಸ್ಯರಾಗಿ ಕೇಂದ್ರ ಸಚಿವರಾಗಿ ಅನೇಕ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಆಹಾರ ಭದ್ರತೆ ಕಾಯ್ದೆ ಜಾರಿಗೆ ತಂದಿದ್ದು, ಮನಮೋಹನ್‍ಸಿಂಗ್ ಪ್ರಧಾನಿಯಾಗಿದ್ದಾಗ. ಈಗ ಐದು ಕೆ.ಜಿ.ಅಕ್ಕಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಜಟಾಪಟಿ ನಡೆಯುತ್ತಿದೆ. ಪ್ರಪಂಚದಲ್ಲಿಯೇ ಎರಡನೆ ಅತಿ ದೊಡ್ಡ ಡ್ಯಾಂ ಕಟ್ಟಿದ್ದು, ನೆಹರು ಕಾಲದಲ್ಲಿ. ಕಾಂಗ್ರೆಸ್ ಕೊಡುಗೆ ದೇಶಕ್ಕೆ ಅಪಾರ ಎಂದು ಗುಣಗಾನ ಮಾಡಿದರು.

ಡಾ.ಬಾಬು ಜಗಜೀವನರಾಂರವರು ದಲಿತರು ಎನ್ನುವ ಕಾರಣಕ್ಕಾಗಿ ದೇಶದ ಪ್ರಧಾನಿಯಾಗುವ ಅವಕಾಶ ಕೈತಪ್ಪಿತ್ತು. ಅವರ ಮಗಳು ಮೀರಾ ಕುಮಾರ್ ಲೋಕಸಭೆ ಸ್ಪೀಕರ್ ಆಗಿದ್ದರು. ತಂದೆ-ಮಗಳು ಇಬ್ಬರು ಚಿತ್ರದುರ್ಗಕ್ಕೆ ಬಂದು ಹೋಗಿದ್ದರು ಎನ್ನುವುದನ್ನು ನೆನಪು ಮಾಡಿಕೊಂಡ ಎಂ.ಕೆ.ತಾಜ್‍ಪೀರ್ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಶೋಷಿತರು ಪ್ರಧಾನಿಯಾಗಬಹುದು.

ಮುಂದೆ ನಡೆಯುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿಕೊಳ್ಳುವಲ್ಲಿ ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ ಮಾತನಾಡಿ ಡಾ.ಬಾಬು ಜಗಜೀವನರಾಂರವರು ಎ.ಐ.ಸಿ.ಸಿ. ಅಧ್ಯಕ್ಷರಾಗಿ ಕೇಂದ್ರ ಮಂತ್ರಿಯಾಗಿ, ಪಾರ್ಲಿಮೆಂಟ್ ಸದಸ್ಯರಾಗಿ ಅನೇಕ ಖಾತೆಗಳನ್ನು ನಿಭಾಯಿಸಿದ್ದರು. ಅಸ್ಪøಶ್ಯ ಜನಾಂಗದಲ್ಲಿ ಹುಟ್ಟಿದ ಒಂದೆ ಕಾರಣಕ್ಕಾಗಿ ದೇಶದ ಪ್ರಧಾನಿಯಾಗುವ ಅವಕಾಶ ತಪ್ಪಿತು. ದಲಿತರು, ಹಿಂದುಳಿದವರು, ಶೋಷಿತರ ಪರವಾಗಿ ಹೋರಾಡಿದ ಮಹಾನ್ ಧೀಮಂತ ನಾಯಕ ಎಂದು ಸ್ಮರಿಸಿದರು.

ದೇಶಕ್ಕೆ ಆಹಾರ ಭದ್ರತೆ ಒದಗಿಸಿದ ಡಾ.ಬಾಬು ಜಗಜೀವನರಾಂರವರ ಪುತ್ರಿ ಮೀರಾ ಕುಮಾರ್ ಐ.ಎಫ್.ಎಸ್.ಅಧಿಕಾರಿಯಾಗಿದ್ದರು.
ಆದರೆ ತಂದೆಯ ಆಸೆಯಂತೆ ಉನ್ನತ ಹುದ್ದೆಯನ್ನು ತೊರೆದು ರಾಜಕೀಯಕ್ಕೆ ಪಾದಾರ್ಪಣೆ ಮಾಡಿ ಲೋಕಸಭೆ ಸ್ಪೀಕರ್ ಕೂಡ ಆದರು ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಬಿ.ಜಿ.ಶ್ರೀನಿವಾಸ್, ಹಿರಿಯ ಉಪಾಧ್ಯಕ್ಷರು ನ್ಯಾಯವಾದಿ ಜಿ.ಎಸ್.ಕುಮಾರ್‍ಗೌಡ, ರವಿಕುಮಾರ್, ಕೋಆರ್ಡಿನೇಟರ್ ಅನಿಲ್‍ಕುಮಾರ್, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಕಾರ್ಯದರ್ಶಿ ಶಬ್ಬೀರ್, ನ್ಯಾಯವಾದಿ ಸುದರ್ಶನ್, ನಾಗರಾಜ್ ಪೈಲೆಟ್, ಮಂಜು, ಮೂಡಲಗಿರಿಯಪ್ಪ, ನೇತ್ರಾವತಿ, ಸೈಯದ್ ಅಫಾಖ್ ಅಹಮದ್, ಭರತ್, ರಹಮತ್‍ವುಲ್ಲಾ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

Share This Article
Leave a Comment

Leave a Reply

Your email address will not be published. Required fields are marked *