Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊರೊನಾ ಸಮಯದಲ್ಲಿ 40 ಸಾವಿರ ಕೋಟಿ ಅವ್ಯವಹಾರ : ಮೋದಿಗೂ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

Facebook
Twitter
Telegram
WhatsApp

 

ಬೆಂಗಳೂರು: ನಿನ್ನೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ತಮ್ಮದೇ ಪಕ್ಷದ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದ್ದರು. ಕೊರೊನಾ ಸಮಯದಲ್ಲಿ 40 ಸಾವಿರ ಕೋಟಿ ಭ್ರಷ್ಟಾಚಾರವಾಗಿರುವ ಬಗ್ಗೆ ತಿಳಿಸಿದ್ದರು. ಇದೀಗ ಆ ಬಗ್ಗೆ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ಅವರಿಗೂ ಪ್ರಶ್ನಿಸಿದ್ದಾರೆ.

ಬಿಜೆಪಿ ಶಾಸಕ @BasanagoudaBJP ಅವರು ಮಾಜಿ ಮುಖ್ಯಮಂತ್ರಿ @BSYBJP ಮತ್ತು ಅವರ ಪುತ್ರ @BYVijayendra ಸೇರಿದಂತೆ ಹಿಂದಿನ ಸರ್ಕಾರದ ಸಂಪುಟದಲ್ಲಿದ್ದ ಕೆಲವು ಸಚಿವರ ವಿರುದ್ಧ ನಿರಂತರವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಾ ಬಂದಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜ್ಯದ @BJP4Karnataka ನಾಯಕರು ಈ ಬಗ್ಗೆ ಮೌನವಾಗಿರುವುದರಲ್ಲಿ ಆಶ್ಚರ್ಯವೇನಿಲ್ಲ.

ತನ್ನನ್ನು ದೇಶದ “ಚೌಕಿದಾರ” ಎಂದು ಬಣ್ಣಿಸಿಕೊಳ್ಳುತ್ತಿರುವ ಮತ್ತು “ನ ಖಾವೂಂಗಾ ನಾ ಖಾನೆ ದೂಂಗಾ” ಎಂದು ಆಗಾಗ ಗುಟುರು ಹಾಕುವ ದೇಶದ ಪ್ರಧಾನಮಂತ್ರಿ @narendramodi ಅವರೂ ತಮ್ಮದೇ ಪಕ್ಷದ ನಾಯಕ ಮಾಡುತ್ತಿರುವ ಇಂತಹ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಮೌನವಾಗಿರುವುದು ನಿಗೂಢವಾಗಿದೆ. ಇದು ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಲ್ಲಿ ಕೇಂದ್ರದ ನಾಯಕರಿಗೂ ಪಾಲು ಹೋಗಿದೆ ಎನ್ನುವ ಆರೋಪಕ್ಕೆ ಎಡೆ ಮಾಡಿಕೊಡುವುದಿಲ್ಲವೇ ಪ್ರಧಾನಿಗಳೇ?

ಶಾಸಕರಾದ @BasanagoudaBJP ಅವರು ಹಿಟ್ ಎಂಡ್ ರನ್ ಮಾಡಬಾರದು. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕೆಂಬ ಬದ್ಧತೆಯನ್ನು ಅವರು ಹೊಂದಿದ್ದರೆ ತಮ್ಮ ಆರೋಪವನ್ನು ತಾರ್ಕಿಕ ಅಂತ್ಯದೆಡೆಗೆ ಒಯ್ಯಬೇಕು. ಇದಕ್ಕಾಗಿ ಅವರು ಕೊರೊನಾ ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಇರುವ ಎಲ್ಲ ಮಾಹಿತಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ರಚಿಸಲಾಗಿರುವ ತನಿಖಾ ಆಯೋಗಕ್ಕೆ ಒಪ್ಪಿಸಬೇಕು.

ಕೊರೊನಾ ಕಾಲದಲ್ಲಿ @BSYBJP ನೇತೃತ್ವದ @BJP4Karnataka ಸರ್ಕಾರ ಅಂದಾಜು 40 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ಎಸಗಿದೆ ಎಂದು ಬಿಜೆಪಿ ಶಾಸಕ @BasanagoudaBJP ಅವರು ನೇರವಾಗಿ ಆರೋಪಿಸುವ ಮೂಲಕ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿತ್ತು ಎನ್ನುವ ನಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ.

ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಮಾರು ರೂ.4,000 ಕೋಟಿ ರೂಪಾಯಿಗಳ ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆಗಳ ಸಮೇತ ನಾವು ಆರೋಪ ಮಾಡಿದ್ದೆವು. ಯತ್ನಾಳ್ ಅವರ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತಲೂ ಹತ್ತು ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ. ನಮ್ಮ ಆರೋಪ ಕೇಳಿ ಹೌಹಾರಿ ಬಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಆಗಿನ ಸಚಿವರ ದಂಡು ಈಗ ಎಲ್ಲಿ ಅಡಗಿ ಕೂತಿದೆ? ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಉಪಚುನಾವಣೆ ಫಲಿತಾಂಶದ ಬಳಿಕ ಸಂಪುಟ ವಿಸ್ತರಣೆ : ಡಿಕೆ ಶಿವಕುಮಾರ್ ಹೇಳಿದ್ದೇನು..?

ಮುರುಡೇಶ್ವರ: ರಾಜ್ಯದ ಉಪಚುನಾವಣೆ, ಮಹಾರಾಷ್ಟ್ರ ಎಲೆಕ್ಷನ್ ಮುಗಿಸಿಕೊಂಡು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಪತ್ನಿ ಜೊತೆಗೆ ಬಿಜಚ್ ಕಡೆಗೆ ಹೋಗಿದ್ದಾರೆ. ಮುರುಡೇಶ್ವರ ಬೀಚಗ ಸದ್ದಿನಲ್ಲಿ ಕೂತು ಕೊಂಚ ರಿಲ್ಯಾಕ್ಸ್ ಆಗಿದ್ದಾರೆ. ಇದೇ ವೇಳೆ ಸಂಪುಟ

ವಕ್ಫ್ ವಿರುದ್ದ ನವೆಂಬರ್ 25 ರಂದು ಭಾರತೀಯ ಕಿಸಾನ್ ಸಂಘದಿಂದ ಬೃಹತ್ ಹೋರಾಟ : ಕರಿಕೆರೆ ತಿಪ್ಪೇಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಭಾರತೀಯ ಕಿಸಾನ್ ಸಂಘದ ವತಿಯಿಂದ ವಕ್ಫ್ ವಿರುದ್ಧ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ

ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ : ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಪಿ.ರವೀಂದ್ರ

ಚಿತ್ರದುರ್ಗ. ನ.22: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ.   ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲು ಪ್ರತಿಗಳನ್ನು

error: Content is protected !!