ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 406 ಜನರಿಗೆ ಹೊಸದಾಗಿ ಸೋಂಕು ಹರಡಿದೆ.
ಕಳೆದ 24 ಗಂಟೆಯಲ್ಲಿ 21166 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 93199 RTPCR ಟೆಸ್ಟ್ ಸೇರಿದಂತೆ ಒಟ್ಟು 114365 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 406 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. 156 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ 637 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಹಾಗೇ ಕೊರೊನಾದಿಂದ ಮುಕ್ತಿ ಸಿಗದೆ, ಚಿಕಿತ್ಸೆ ಫಲಕಾರಿಯಾಗದೆ 10 ಜನ ಬಲಿಯಾಗಿದ್ದಾರೆ.