ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 442 ಮಂದಿಗೆ ಹೊಸದಾಗಿ ಕೊರೊನಾ ಪಾಸಿಟಿವ್ ಆಗಿದೆ.
ಕಳೆದ 24 ಗಂಟೆಯಲ್ಲಿ 18949 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 103698 RTPCR ಟೆಸ್ಟ್ ಸೇರಿದಂತೆ ಒಟ್ಟು 122647 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 442 ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ. 166 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ ಕೊರೊನಾದಿಂದ 635 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. 7 ಮಂದಿ ಗುಣಮುಖರಾಗದೆ ಕೊರೊನಾದಿಂದಾಗಿ ಅಸುನೀಗಿದ್ದಾರೆ.