Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಮೊಗ್ಗದಲ್ಲಿ ಜ.31 ರಿಂದ ಎಬಿವಿಪಿ ದಕ್ಷಿಣ ಪ್ರಾಂತದ 44ನೇ ಪ್ರಾಂತ ಸಮ್ಮೇಳನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಜ.16 : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ 44ನೇ ಪ್ರಾಂತ ಸಮ್ಮೇಳನ 2025ನೇ ಜನವರಿ 31 ಫೆಬ್ರವರಿ 1, 2 ರಂದು ಶಿವಮೊಗ್ಗದಲ್ಲಿ ಜರುಗಲಿದ್ದು, ಇದರ ಪೋಸ್ಟರ್‍ನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಚಿತ್ರದುರ್ಗವತಿಯಿಂದ ಮಾದಾರ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರು ಇಂದು ಮಠದ ಆವರಣದಲ್ಲಿ ಬಿಡುಗಡೆ ಮಾಡಿದರು.

 

ಕಳೆದ ಭಾರಿ 43ನೇ ಪ್ರಾಂತ ಸಮ್ಮೇಳನ ನವದೆಹಲಿಯಲ್ಲಿ ನಡೆದಿತ್ತು. 2016 ರಲ್ಲಿ ನಡೆದ 35ನೇ ರಾಜ್ಯ ಸಮ್ಮೇಳನದ ಉದ್ಘಾಟನೆಯನ್ನು ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರು ನೆರವೇರಿಸಿದ್ದರು. 44ನೇ ಪ್ರಾಂತ ಸಮ್ಮೇಳನ ಶಿವಮೊಗ್ಗದಲ್ಲಿ ನಡೆಯಲಿರುವ ಪೋಸ್ಟರ್‍ನ್ನು ಶ್ರೀ ಪರಮಪೂಜ್ಯ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಬಿಡುಗಡೆ ಮಾಡಿ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಆರ್ಶಿವದಿಸಿದರು. ಇದೇ ಸಂದರ್ಭದಲ್ಲಿ ಚಿತ್ರದುರ್ಗ ನಗರದ ವಿವಿಧ ಕಾಲೇಜಿನಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಯಿತು.

 

ಈ ಸಂದರ್ಭದಲ್ಲಿ ಸಹ ಪ್ರಾಧ್ಯಾಪಕ ಡಾ.ಸ.ರಾ. ಲೇಪಾಕ್ಷ, ಎಬಿವಿಪಿಯ ವಿಭಾಗ ಸಹ ಸಂಚಾಲರು ಗೋಪಿ, ಚಿತ್ರದುರ್ಗ ಜಿಲ್ಲಾ ಸಂಚಾಲಕರು ಕನಕರಾಜ್ ಕೋಡಿಹಳ್ಳಿ, ನಗರ ಸಹ ಕಾರ್ಯದರ್ಶಿ ಸಂಜಯ್, ಕಾರ್ಯಕರ್ತರಾದ ತಿಪ್ಪೇಶ್, ಚರಣ್, ವಿಕಾಸ್, ಮಧು,ಮನೋಜ್,ಜೀವನ್ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment