ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.01 : ರಾಜ್ಯ ಸರ್ಕಾರ ಈ ಬಾರಿ ಮಂಡಿಸಲಿರುವ ಬಜೆಟ್‍ನಲ್ಲಿ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾ.4 ಮತ್ತು 5 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಎನ್.ನಿಂಗಮ್ಮ ತಿಳಿಸಿದರು.

ವೇತನ ಹೆಚ್ಚಳಕ್ಕಾಗಿ ಹಲವು ವರ್ಷಗಳಿಂದ ರಾಜ್ಯ ಸರ್ಕಾರದ ಗಮನ ಸೆಳೆಯುತ್ತಿದ್ದೇವೆ. ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ವೇತನ ಹೆಚ್ಚಳ, ಬರಪೀಡಿತ ಜಿಲ್ಲೆಗಳಲ್ಲಿ ಏಪ್ರಿಲ್-ಮೇ ತಿಂಗಳಿನಲ್ಲಿ ಕೆಲಸ ಮಾಡಿದ ವೇತನ ಬಿಡುಗಡೆ. ಅಡುಗೆ ಕೇಂದ್ರಗಳ ಪುನಶ್ಚೇತನ, ಗುಣಮಟ್ಟದ ಆಹಾರ ಪದಾರ್ಥಗಳ ಸರಬರಾಜು, ಪ್ರತಿ ತಿಂಗಳು ನಿಗಧಿತ ದಿನಾಂಕದಂದು ಗೌರವ ಧನ, ಸಾದಿಲ್ವಾರು, ಮೊಟ್ಟೆ ಹಣ ತಕ್ಷಣವೆ ಬಿಡುಗಡೆಗೊಳಿಸುವಂತೆ ನಡೆಯುವ ಈ ಹೋರಾಟದಲ್ಲಿ ಜಿಲ್ಲೆಯ ಬಿಸಿಯೂಟ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎನ್.ನಿಂಗಮ್ಮ, ಸಿ.ಐ.ಟಿ.ಯು. ಜಿಲ್ಲಾ ಸಂಚಾಲಕ ಡಿ.ಎಂ.ಮಲಿಯಪ್ಪ ಇವರುಗಳು ಮನವಿ ಮಾಡಿದ್ದಾರೆ.


