ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಜ. 24 : ತಾಲ್ಲೂಕಿನ ಲಕ್ಷ್ಮೀ ಸಾಗರ ಗೇಟ್ ಎದುರಿನಲ್ಲಿರುವ ಶ್ರೀ ತುಳಜಾಭವನಿ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಶ್ರೀ ತುಳಜಾಭವಾನಿ ಅಮ್ಮನವರ 4 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಜ. 25ರ ಭಾನುವಾರ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ತುಳಜಾಭವನಿ ದೇವಸ್ಥಾನ ಸೇವಾ ಟ್ರಸ್ಟ್‌ನ ಅಧ್ಯಕ್ಷರಾದ ಸತೀಶ್ ಬಾಬು ಮಾಳಲ್ಕರ್ ಹಾಗೂ ಕಾರ್ಯದರ್ಶಿ ಸಂತೋಷ ಮಾಳಲ್ಕರ್ ತಿಳಿಸಿದ್ದಾರೆ.
ಜ. 25ರ ಭಾನುವಾರ ಶ್ರೀ ತುಳಜಾಭವಾನಿ ಅಮ್ಮನವರ 4 ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಕಳಾ ಹೋಮವನ್ನು ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ 12ರವರೆಗೆ ಮಹಾ ಮಂಗಳಾರತಿ ನಡೆಯಲಿದ್ದು, ತದ ನಂತರ ಪ್ರಸಾದ ವಿನಿಯೋಗ ಇರುತ್ತದೆ. ಭಕ್ತಾಧಿಗಳು ಈ ಕಾರ್ಯಕ್ರಮಕ್ಕೆ ಆಗಮಿಸುವುದರ ಮೂಲಕ ಅಮ್ಮನವರ ಕೃಪೆಗೆ ಪಾತ್ರರಾಗುವಂತೆ ವ್ಯವಸ್ಥಾಪಕರಾದ ದಾಸ್ಯ ನಾಯ್ಕ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9980391212 ಇವರನ್ನು ಸಂಪರ್ಕ ಮಾಡಬಹುದಾಗಿದೆ.






