Connect with us

Hi, what are you looking for?

ಪ್ರಮುಖ ಸುದ್ದಿ

ಒಂದು ವಾರದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಮೀಸಲು: ಸಚಿವ ಸುಧಾಕರ್

ಬೆಂಗಳೂರು: ಕಳೆದ ಬಾರಿ ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲಿಡಲಾಗಿತ್ತು. ಇದೇ ರೀತಿ ಈಗ ಹಾಸಿಗೆ ಮೀಸಲಿಡಬೇಕು ಎಂದು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್ ಗಳ ಸಂಘಟನೆ (PHANA) ಸಂಘಟನೆ ಜೊತೆ ವೀಡಿಯೋ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಕೋವಿಡ್ ಅಲ್ಲದ ರೋಗಿಗಳಿಗೆ ದಾಖಲಾತಿ ಅವಶ್ಯಕತೆ ಇಲ್ಲದಿದ್ದಲ್ಲಿ ಅಂತಹ ರೋಗಿಗಳಿಗೆ ಮನವಿ ಮಾಡಿ, ಬಿಡುಗಡೆ ಮಾಡಬೇಕು. ಅವನ್ನು ಕೋವಿಡ್ ಗೆ ಮೀಸಲಿಡಬೇಕು ಎಂದು ಹೇಳಲಾಗಿದೆ. ಒಂದು ವಾರದೊಳಗೆ 50% ರಷ್ಟು ಹಾಸಿಗೆ ನೀಡಲು ಖಾಸಗಿ ಆಸ್ಪತ್ರೆಗಳವರು ಒಪ್ಪಿಕೊಂಡಿದ್ದಾರೆ. ಅಲ್ಪ ರೋಗಲಕ್ಷಣ ಹಾಗೂ ಲಕ್ಷಣರಹಿತ ರೋಗಿಗಳಿಗೆ ಹೋಟೆಲ್ ಗಳಲ್ಲಿ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ವ್ಯವಸ್ಥೆ ಮಾಡಬೇಕೆಂದು ಸೂಚಿಸಲಾಗಿದೆ. ಆಸ್ಪತ್ರೆಗಳ ಹಾಸಿಗೆಗಳಲ್ಲಿ ಅನಿವಾರ್ಯ ಇರುವವರಿಗೆ ಚಿಕಿತ್ಸೆ ನೀಡಬೇಕೆಂದು ಸೂಚಿಸಲಾಗಿದೆ ಎಂದರು.

ರೆಮಿಡಿಸಿವಿರ್ ಔಷಧಿ ತಯಾರಿಕೆ, ಪೂರೈಕೆಯನ್ನು ಕಂಪನಿಗಳು ಸ್ಥಗಿತಗೊಳಿಸಿವೆ. ರಾಜ್ಯಕ್ಕೆ ಇದರ ಅಗತ್ಯ ಇದೆ. ಕೆಲ ಖಾಸಗಿ ಆಸ್ಪತ್ರೆಗಳು ಔಷಧಿ ಲಭ್ಯವಾಗುತ್ತಿಲ್ಲ ಎಂದು ದೂರಿದ್ದಾರೆ. ಡ್ರಗ್ ಕಂಟ್ರೋಲರ್ ಜೊತೆ ಚರ್ಚಿಸಿ, ಅಗತ್ಯವಿರುವ ಔಷಧ ಪ್ರಮಾಣ ಗುರುತು ಮಾಡಿ, ಸರ್ಕಾರದಿಂದಲೇ ನಿರ್ದಿಷ್ಟ ದರದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಪೂರೈಸುವ ಕ್ರಮ ವಹಿಸಲಾಗುವುದು. *ಆಕ್ಸಿಜನ್, ಆಕ್ಸಿಜನ್ ಜನರೇಟರ್ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ. ಕೊರತೆಯ ಸಂಭವ ಬಂದರೆ ಕೈಗಾರಿಕಾ ಆಕ್ಸಿಜನ್ ಬಳಸಲು ಕ್ರಮ ವಹಿಸಲಾಗುವುದು ಎಂದರು.

ತಾಂತ್ರಿಕ ಸಲಹಾ ಸಮಿತಿಯು ಮುಂದಿನ ಎರಡು ತಿಂಗಳ ಕೊರೊನಾ ಸ್ಥಿತಿಗತಿಯನ್ನು ಅಂದಾಜಿಸಿದ್ದು, ಸರ್ಕಾರ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಲಹೆ ನೀಡಿದೆ. ಈ ಒಂದು ವರ್ಷದ ಅನುಭವದಲ್ಲಿ ಕೊರೊನಾ ಬಗ್ಗೆ ಗೊತ್ತಾಗಿದೆ. ಕೋವಿಡ್ ನಿಂದಾಗಿ ಆರ್ಥಿಕ ನಷ್ಟ ಉಂಟಾಗಿದ್ದು, ಜನರು ಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಲಾಕ್ ಡೌನ್ ನಂತಹ ಕಠಿಣ ಕ್ರಮಕ್ಕೆ ಮುಂದಾಗುವುದು ಕಷ್ಟ ಎಂದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಸುದ್ದಿಒನ್, ದಾವಣಗೆರೆ,(ಜೂನ್.15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರ ವರದಿಯಲ್ಲಿ 183 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47668 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ದಾವಣಗೆರೆ 69...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ನಗರದ ವಿ .ಪಿ. ಬಡಾವಣೆಯಲ್ಲಿ ಕನ್ಸರ್‍ವೆನ್ಸಿಗಳನ್ನು ಒತ್ತುವರಿ ಮಾಡಲಾಗಿದೆ ಇವುಗಳನ್ನು ತೆರವು ಮಾಡಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪೌರಾಯುಕ್ತರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ನಗರದ ವಿ.ಪಿ.ಬಡಾವಣೆಯ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಸುದ್ದಿಒನ್,ಬಳ್ಳಾರಿ, (ಜೂ.15) : ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‍ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ 339 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ,(ಜೂನ್15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು...

ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆದ್ದವರಿಗೆ ಎಷ್ಟು ಮೊತ್ತ ಸಿಗಬಹುದು ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಿಗೆ ಯಾವಾಗಲೂ ಕಾಡುವಂತ ಪ್ರಶ್ನೆ. ಆ ಪ್ರಶ್ನೆಗೆ ಇಂದು ಐಸಿಸಿ ಉತ್ತರಿಸಿದೆ. ಟೆಸ್ಟ್ ಚಾಂಪಿಯನ್ ಶಿಪ್...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.15) : ನಗರದ ಅಲೆಮಾರಿ, ಕೂಲಿ ಕಾರ್ಮಿಕರು, ಬಡವರು ಹಾಗೂ ನಿರ್ಗತಿಕರಿಗೆ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ನಗರದ ಪತ್ರಿಕಾ ಭವನದ...

ಪ್ರಮುಖ ಸುದ್ದಿ

ನವದೆಹಲಿ : ಕೋವಿಡ್ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿಗೆ ಸಿದ್ಧತೆಗಳು ನಡೆದಿವೆ. ವರ್ಷದ ಅಂತ್ಯದಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಆದರೆ ಪ್ರವಾಸದ ಸಮಯ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ಸಂಚಾರಿ ವಿಜಯ್ ನಮ್ಮೊಂದಿಗಿಲ್ಲ ಎನ್ನಲು ಮನಸ್ಸು ತುಂಬಾ ಭಾರವಾಗುತ್ತಿದೆ. ಆ ದೇವರು ಯಾವ ತಪ್ಪನ್ನು ತನ್ನ ಮೇಲೆ ಹಾಕಿಕೊಳ್ಳೊಲ್ಲ. ಬದುಕೆಂಬ ರಂಗಶಾಲೆಯಲ್ಲಿ ನಾನಾ ಪಾತ್ರಗಳಿಗೆ ತಮಗೆ ತಿಳಿಯದಂತೆ...

error: Content is protected !!