ಬೆಂಗಳೂರು: ಆರೋಗ್ಯ ಇಲಾಖೆ ಕಳೆದ 24 ಗಂಟೆಯಲ್ಲಿ ಕೊರೊನಾ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಅದರಲ್ಲಿ 514 ಜನಕ್ಕೆ ಹೊಸದಾಗಿ ಸೋಂಕು ಹರಡಿದೆ.
ಕಳೆದ 24 ಗಂಟೆಯಲ್ಲಿ 14715 ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್, 46,325 RTPCR ಟೆಸ್ಟ್ ಸೇರಿದಂತೆ ಒಟ್ಟು 61,040 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 514 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ 345 ಮಂದಿ ಪತ್ತೆಯಾಗಿದ್ದಾರೆ.
ಇನ್ನು ಕೊರೋನಾದಿಂದ ಒಟ್ಟು 1073 ಜನ ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಕಳೆದ 24 ಗಂಟೆಯಲ್ಲಿ ಕೊರೊನಾದಿಂದ 19 ಜನ ಸಾವನ್ನಪ್ಪಿದ್ದಾರೆ.