ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 523 ಜನಕ್ಕೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಕಳೆದ 24 ಗಂಟೆಯಲ್ಲಿ 27975 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 59328 RTPCR ಟೆಸ್ಟ್ ಸೇರಿದಂತೆ ಒಟ್ಟು 87303 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 523 ಜನಕ್ಕೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಅದರಲ್ಲಿ 201 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ 575 ಜನ ರಾಜ್ಯಾದ್ಯಂತ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. 14 ಜನ ಕೊರೊನಾದಿಂದಾಗಿ ಅಸುನೀಗಿದ್ದಾರೆ.