Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಗೋವಿಂದ ಕಾರಜೋಳ ಸಂತಸ

Facebook
Twitter
Telegram
WhatsApp

ಬೆಂಗಳೂರು :  ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5300 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಜಲ ಸಂಪನ್ಮೂಲ ಸಚಿವ
ಗೋವಿಂದ ಕಾರಜೋಳ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದು, ಬಜೆಟ್ ನಲ್ಲಿ ಅನುದಾನ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಪರವಾಗಿ ಧನ್ಯವಾದಗಳು ಎಂದು ಹೇಳಿದ್ದಾರೆ.

ಬರಪೀಡಿತ ಮತ್ತು ಬರ ಸಂಭವನೀಯ ಪ್ರದೇಶದ ರೈತರ ಬಾಳಿನಲ್ಲಿ ಬೆಳಕು ಮೂಡಿಸುವ ಸ್ವತಂತ್ರ ಭಾರತದ ಮೊದಲ ನೀರಾವರಿ ಯೋಜನೆಯನ್ನು ರಾಷ್ಟ್ರೀಯ ಯೋಜಯನ್ನಾಗಿ ಘೋಷಣೆ ಮಾಡಿರುವ ಪ್ರಧಾನ ಮಂತ್ರಿ  ಶ್ರೀ ನರೇಂದ್ರ ಮೋದಿಯವರ ನೇತೃತ್ವದ ಜನಪರ ಸರ್ಕಾರದ ನಿಲುವನ್ನು ನಾನು ಅತ್ಯಂತ ಹರ್ಷದಿಂದ ಸ್ವಾಗತಿಸುತ್ತೇನೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ, ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರಿಗೆ ಕೇಂದ್ರ ಜಲ ಸಂಪನ್ಮೂಲ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ರವರಿಗೆ ಕೇಂದ್ರ ಸಂಪುಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಶ್ರೀ ಪ್ರಹ್ಲಾದ ಜೋಶಿ, ಕು|| ಶೋಭಾ ಕರಂದ್ಲಾಜೆ, ಶ್ರೀ ನಾರಾಯಣಸ್ವಾಮಿ, ಶ್ರೀ ಭಗವಂತ ಖೂಬಾ, ಶ್ರೀ ರಾಜೀವ್ ಚಂದ್ರಶೇಖರ್  ಹಾಗೂ ಕೇಂದ್ರ ಸಂಪುಟದ ಎಲ್ಲಾ ಸದಸ್ಯರಿಗೆ ಹಾಗೂ ರಾಜ್ಯದ ಎಲ್ಲ ಸಂಸದರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು.

ಕೇಂದ್ರದ ಈ ಕ್ರಮದಿಂದ ಕರ್ನಾಟಕದ ಮಹತ್ವದ ನೀರಾವರಿ ಯೋಜನೆ ಹಣಕಾಸಿನ ನೇರವಿನಿಂದ ರೈತರ ಬಾಳನ್ನು ಹಸನುಗೊಳಿಸಲಿದೆ. ಇಂತಹ ಐತಿಹಾಸಿಕ ಕ್ರಮದಿಂದ ಭಾರತೀಯ ಜನತಾ ಪಕ್ಷದ ಕೇಂದ್ರ ಸರ್ಕಾರವು ಕರ್ನಾಟಕದ ಜನರ ಭಾವನೆಗಳನ್ನು ಗುರುತಿಸಿ, ಗೌರವಿಸಿ ರೈತರ ಬಾಳಿನಲ್ಲಿ ಗುಣಾತ್ಮಕ ಬದಲಾವಣೆ ತರಲು ಪರಿಣಾಮಕಾರಿಯಾದ ಮಹತ್ವದ ಹೆಜ್ಜೆಯನ್ನು ಇರಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ
ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!