ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಮಾರ್ಚ್.19) : ಮಧ್ಯ ಕರ್ನಾಟಕದ ಬರದ ನಾಡನ್ನು ಹಸಿರಾಗಿಸಲು ಭದ್ರಾ ಮೇಲ್ದಂಡೆ ಯೋಜನೆಯನ್ನು ಶಂಕುಸ್ಥಾಪನೆ ಮಾಡಿದ್ದು ನಾವೇ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡುತ್ತಿರುವುದು ನಾವೇ, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ ಹಾಗೂ ನಾವೇ ಆಗಮಿಸಿ ಉದ್ಘಾಟನೆಯನ್ನು ಕೂಡ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಹೊಳಲ್ಕೆರೆ ಪಟ್ಟಣದಲ್ಲಿ ಭಾನುವಾರ ಹೊಳೆಲ್ಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸೌಲಭ್ಯ ಮತ್ತು ಸಲಕರಣೆಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ವೇಳೆ, ನಾನು ಜಲಸಂಪನ್ಮೂಲ ಸಚಿವನಾಗಿದ್ದ ಸಂದರ್ಭದಲ್ಲಿ, ಅವರು ಕೈಗೊಂಡ ದಿಟ್ಟ ನಿಲುವಿನಿಂದಾಗಿ, ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಭದ್ರಾ ಮೇಲ್ದಂಡೆ ಯೋಜನೆ ರೂಪಿಸಿ, ಕಾಮಗಾರಿ ಆರಂಭಿಸಲಾಯಿತು. ಕೇಂದ್ರ ಸರ್ಕಾರ ಈ ಯೋಜನೆಗೆ ರೂ.5300 ಕೋಟಿಗಳ ಅನುದಾನವನ್ನು ಬಜೆಟ್‍ನಲ್ಲಿ ಮೀಸಲಿರಿಸಿದೆ.
ಮಧ್ಯ ಕರ್ನಾಟಕದ ಜನರ ಭೂಮಿಗೆ ನೀರು ಕೊಟ್ಟು, ಬರದ ಭೂಮಿಯನ್ನು ಹಸಿರಾಗಿಸುವ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತಿದ್ದು, ಯೋಜನೆಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲಾಗುವುದು. ಬರದ ನಾಡನ್ನು ಹಸಿರಾಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದು ನಾವೇ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡುತ್ತಿರುವುದು ನಾವೇ, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ ಹಾಗೂ ನಾವೇ ಆಗಮಿಸಿ ಉದ್ಘಾಟನೆಯನ್ನು ಕೂಡ ಮಾಡುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್