ಶಿವಮೊಗ್ಗ: ರಾಜ್ಯದಲ್ಲಿ ಮಂಗನ ಕಾಯಿಲೆ ಸಾಕಷ್ಟು ಆತಂಕ ಸೃಷ್ಟಿ ಮಾಡುತ್ತಿದೆ. ಅದರಲ್ಲೂ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈಗ ಆರು ದಿನದಲ್ಲಿಯೇ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ಆರು ಜನರಿಗೆ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಒಟ್ಟು 32 ಮಂಗನ ಕಾಯಿಲೆಗಳು ಕಾಣಿಸಿಕೊಂಡಿರುವ ರೋಗಿಗಳಿದ್ದಾರೆ.
ಮಂಗನ ಕಾಯಿಲೆ ಕಾಣಿಸಿಕೊಂಡ ಆರು ಜನರನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜೊತೆಗೆ ರೋಗಿಗಳ ಸಂಪರ್ಕಕ್ಕೆ ಬಂದವರ ರಕ್ತಪರೀಕ್ಷೆಗೆ ಒಳಪಡಿಸಲಾಗಿದೆ. 42 ಜನರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ. ಸೂಕ್ತವಾದ ಚಿಕಿತ್ಸೆಯನ್ನು ನೀಡಲಾಗಿದೆ. ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಧೈರ್ಯದಿಂದ ಇರಿ ಎಂದು ತಾಲೂಕು ಆಸ್ಪತ್ರೆಗೆ ಜಿಲ್ಲಾ ವೈದ್ಯಾಧಿಕಾರಿ ರಾಜೇಶ್ ಸುರಗಿಹಳ್ಳಿ ಅವರು ಹೇಳಿದ್ದಾರೆ.
ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಇತ್ತಿಚೆಗೆ ಯುವತಿಯೊಬ್ಬಳು ಸಾವನ್ನಪ್ಪಿದ್ದಳು. ಒಂದು ವಾರದ ಹಿಂದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಪ್ಪನಮನೆ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ 18 ವರ್ಷದ ಯುವತಿ ಮೃತಪಟ್ಟಿದ್ದರು. ಬೊಪ್ಪನೆಮನೆ ಗ್ರಾಮದ ನಿವಾಸಿ ಅನನ್ಯ ಮೃತ ಯುವತಿ. ಇದು ಮಂಗನ ಕಾಯಿಲೆಗೆ ಮೃತಪಟ್ಟ ಮೊದಲ ಪ್ರಕರಣವಾಗಿದೆ. ಚಳಿ ಜ್ವರದಿಂದ ಬಳಲುತ್ತಿದ್ದ ಯುವತಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೂರು ದಿನ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಈಗ ಮಂಗನ ಕಾಯಿಲೆ ಜಾಸ್ತಿಯಾಗುತ್ತಿರುವ ಕಾರಣ ಸಹಜವಾಗಿಯೇ ಜನರಿಗೆ ಆತಂಕ ಸೃಷ್ಟಿಯಾಗಿದೆ. ಜನ ಕೂಡ ಎಚ್ಚರದಿಂದ ಇರಬೇಕಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












