ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು; ಒಂದನೇ ತರಗತಿಗೆ ಮಕ್ಕಳನ್ನು ಸೇರಿಸಬೇಕು ಅಂದ್ರೆ ಆರು ವರ್ಷ ಕಡ್ಡಾಯವಾಗಿರಬೇಕು ಎಂಬ ನಿಯಮವಿದೆ. ಇದು ಪೋಷಕರುಗೆ ಬಹಳಷ್ಟು ತೊಂದರೆಯಾಗುತ್ತಿದೆ. ಒಂದು ಅಥವಾ ಎರಡು ತಿಂಗಳು ಕಡಿಮೆ ಇದ್ದರು, ಸೇರಿಸಿಕೊಳ್ಳುವುದಕ್ಕೆ ಹೋಗುವುದಿಲ್ಲ. ಇದರಿಂದ ನೊಂದಿರುವ ಪೋಷಕರಿಗೆ ಇದೀಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ ನೀಡಿದ್ದಾರೆ.
ಶಾಲಾ ವಯೋಮಿತಿಯನ್ನು ಸಡಿಲಗೊಳಿಸಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. SEP ಆಧಾರದ ಮೇಲೆ ಕಡ್ಡಾಯ ಆರು ವರ್ಷ ವಯೋಮಿತಿಯಲ್ಲಿ ಬದಲಾವಣೆಯನ್ನು ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಕ್ಕಳ 1ನೇ ತರಗತಿ ಸೇರ್ಪಡೆಗೆ ಈ ವರ್ಷ ಈ ಹಿಂದಿನ ನಿಯಮ ಪಾಲನೆ ಮಾಡಲಾಗುತ್ತಿದೆ. ಅಂದ್ರೆ ಐದು ವರ್ಷ ಐದು ತಿಂಗಳು ಇರುವ ಮಕ್ಕಳಿಗೆ ಈ ವರ್ಷ ಒಂದನೇ ತರಗತಿ ನೋಂದಣಿಗೆ ಅವಕಾಶ ಮಾಡಲಾಗುತ್ತಿದೆ. ಒಂದನೇ ತರಗತಿಯ ಅಡ್ಮಿಷನ್ ಜಿತೆಗೆ ಎಲ್ ಕೆ ಜಿ ಪ್ರವೇಶ ಪಡೆಯುವ ಮಕ್ಕಳಿಗೆ ನಾಲ್ಕು ವರ್ಷ ವಯೋಮಿತಿ ನಿಗದಿಪಡಿಸಲಾಗುತ್ತಿದೆ ಎಂದಿದ್ದಾರೆ.
ಈ ವಿಚಾರ ಕೇಳಿ ಪೋಷಕರಿಗಂತು ತುಂಬಾನೇ ಖುಷಿಯಾಗಿದೆ. ಯಾಕಂದ್ರೆ ಹೊಸ ಶೈಕ್ಷಣಿಕ ವರ್ಷದಲ್ಲಿ ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವುದಕ್ಕಾಗಿ ಹಲವು ಪೋಷಕರು ಕಾಯುತ್ತಾ ಕುಳಿತಿದ್ದಾರೆ. ಅದರಲ್ಲೂ ಶಿಕ್ಷಣ ಸಚಿವರಿಂದ ವಯೋಮಿತಿ ಸಡಿಲಿಕೆ ಬಗ್ಗೆ ಕ್ಲಾರಿಟಿ ಸಿಗಲಿ ಅಂತಾನೇ ಸಾಕಷ್ಟು ಜನ ಕಾಯುತ್ತಿದ್ದರು. ಇದೀಗ ಆ ಪೋಷಕರಿಗೆಲ್ಲಾ ಗುಡ್ ನ್ಯೂಸ್ ಸಿಕ್ಕಂತೆ ಆಗಿದೆ. ಈ ವರ್ಷದಿಂದ ವಯೋಮಿತಿ ಕಡಿಮೆ ಇದ್ದರು ಒಂದನೇ ತರಗತಿಗೆ ತಮ್ಮ ಮಕ್ಕಳನ್ನು ಸೇರಿಸಬಹುದು ಎಂಬ ಸಂತಸ ಪೋಷಕರಿಗೆ ಸಿಕ್ಕಿದೆ.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್