Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಜಿಲ್ಲೆಯಲ್ಲಿ 664.91 ಹೆಕ್ಟೇರ್ ಕೃಷಿ ಬೆಳೆ ನಾಶ

---Advertisement---

ಚಿತ್ರದುರ್ಗ.24: ಜಿಲ್ಲೆಯಲ್ಲಿ ಅಕ್ಟೋಬರ್ ಮಾಹೆಯಲ್ಲಿ ಬಿದ್ದಂತಹ ಹೆಚ್ಚಿನ ಮಳೆಯಿಂದಾಗಿ ಬೆಳೆಹಾನಿಯಾಗಿದ್ದು, ಜಿಲ್ಲೆಯಾದ್ಯಂತ 664.91 ಹೆಕ್ಟೇರ್‍ಗಳಷ್ಟು ಪ್ರದೇಶದಲ್ಲಿ ಬೆಳೆಹಾನಿಯಾಗಿರುವುದಾಗಿ ಸರ್ಕಾರಕ್ಕೆ ವರದಿ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೃಷಿ ಬೆಳೆಗಳಾದ ಮೆಕ್ಕೆಜೋಳ-102397 ಹೆಕ್ಟೇರ್, ಶೇಂಗಾ-107013 ಹೆಕ್ಟೇರ್, ರಾಗಿ-44398 ಹೆಕ್ಟೇರ್, ಸಿರಿಧಾನ್ಯಗಳು-30486 ಹೆಕ್ಟೇರ್, ತೊಗರಿ-21024 ಹೆಕ್ಟೇರ್, ಹತ್ತಿ-8177 ಹೆಕ್ಟೇರ್ ಮತ್ತು ಇನ್ನಿತರೆ ಬೆಳೆಗಳನ್ನೊಳಗೊಂಡಂತೆ ಒಟ್ಟು 3,19,007 ಹೆಕ್ಟೇರ್ ಪ್ರದೇಶಲ್ಲಿ ಕೃಷಿ ಬೆಳೆಗಳ ಬಿತ್ತನೆಯಾಗಿದೆ.

ಜಿಲ್ಲೆಯಾದ್ಯಂತ ಹಲವು ದಿನಗಳಿಂದ ಬಿದ್ದಂತಹ ಮಳೆಯಿಂದಾಗಿ ಜಿಲ್ಲೆಯಲ್ಲಿ ಶೇಂಗಾ-237.60 ಹೆಕ್ಟೇರ್, ಮೆಕ್ಕೆಜೋಳ-311.60 ಹೆಕ್ಟೇರ್, ತೊಗರಿ- 77.40 ಹೆಕ್ಟೇರ್, ಹತ್ತಿ-16.80 ಹೆಕ್ಟೇರ್, ರಾಗಿ- 10.40 ಹೆಕ್ಟೇರ್, ಸಜ್ಜೆ- 3.51 ಹೆಕ್ಟೇರ್, ಭತ್ತ – 1.60 ಹೆಕ್ಟೇರ್ ಹಾಗೂ ಇತರೆ ಬೆಳೆಗಳನ್ನೊಳಗೊಂಡಂತೆ ಒಟ್ಟಾರೆ 664.91 ಹೆಕ್ಟೇರ್‍ಗಳಷ್ಟು ಪ್ರದೇಶದಲ್ಲಿ ಬೆಳೆ ಹಾನಿಯಾದ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಕೃಷಿ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...