ಚಿತ್ರದುರ್ಗ.24: ಜಿಲ್ಲೆಯಲ್ಲಿ ಅಕ್ಟೋಬರ್ ಮಾಹೆಯಲ್ಲಿ ಬಿದ್ದಂತಹ ಹೆಚ್ಚಿನ ಮಳೆಯಿಂದಾಗಿ ಬೆಳೆಹಾನಿಯಾಗಿದ್ದು, ಜಿಲ್ಲೆಯಾದ್ಯಂತ 664.91 ಹೆಕ್ಟೇರ್‍ಗಳಷ್ಟು ಪ್ರದೇಶದಲ್ಲಿ ಬೆಳೆಹಾನಿಯಾಗಿರುವುದಾಗಿ ಸರ್ಕಾರಕ್ಕೆ ವರದಿ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೃಷಿ ಬೆಳೆಗಳಾದ ಮೆಕ್ಕೆಜೋಳ-102397 ಹೆಕ್ಟೇರ್, ಶೇಂಗಾ-107013 ಹೆಕ್ಟೇರ್, ರಾಗಿ-44398 ಹೆಕ್ಟೇರ್, ಸಿರಿಧಾನ್ಯಗಳು-30486 ಹೆಕ್ಟೇರ್, ತೊಗರಿ-21024 ಹೆಕ್ಟೇರ್, ಹತ್ತಿ-8177 ಹೆಕ್ಟೇರ್ ಮತ್ತು ಇನ್ನಿತರೆ ಬೆಳೆಗಳನ್ನೊಳಗೊಂಡಂತೆ ಒಟ್ಟು 3,19,007 ಹೆಕ್ಟೇರ್ ಪ್ರದೇಶಲ್ಲಿ ಕೃಷಿ ಬೆಳೆಗಳ ಬಿತ್ತನೆಯಾಗಿದೆ.
ಜಿಲ್ಲೆಯಾದ್ಯಂತ ಹಲವು ದಿನಗಳಿಂದ ಬಿದ್ದಂತಹ ಮಳೆಯಿಂದಾಗಿ ಜಿಲ್ಲೆಯಲ್ಲಿ ಶೇಂಗಾ-237.60 ಹೆಕ್ಟೇರ್, ಮೆಕ್ಕೆಜೋಳ-311.60 ಹೆಕ್ಟೇರ್, ತೊಗರಿ- 77.40 ಹೆಕ್ಟೇರ್, ಹತ್ತಿ-16.80 ಹೆಕ್ಟೇರ್, ರಾಗಿ- 10.40 ಹೆಕ್ಟೇರ್, ಸಜ್ಜೆ- 3.51 ಹೆಕ್ಟೇರ್, ಭತ್ತ – 1.60 ಹೆಕ್ಟೇರ್ ಹಾಗೂ ಇತರೆ ಬೆಳೆಗಳನ್ನೊಳಗೊಂಡಂತೆ ಒಟ್ಟಾರೆ 664.91 ಹೆಕ್ಟೇರ್‍ಗಳಷ್ಟು ಪ್ರದೇಶದಲ್ಲಿ ಬೆಳೆ ಹಾನಿಯಾದ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಕೃಷಿ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











