Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

HSRP ಪ್ಲೇಟ್ ಅಳವಡಿಸಲು 6ನೇ ಬಾರಿ ಗಡುವು ವಿಸ್ತರಣೆ : ಜ.31 ಕೊನೆಯ ದಿನಾಂಕ

---Advertisement---

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆ ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸುವುದಕ್ಕೆ ಸೂಚನೆ ನೀಡಿದೆ. ಈ ಸಂಬಂಧ ಇದೀಗ ಆರನೇ ಬಾರಿಗೆ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ನೀಡಿದೆ. ವಾಹನ ಮಾಲೀಕರು ಈ ಸಲ ಆದರೂ ನಂಬರ್ ಪ್ಲೇಟ್ ಅಳವಡಿಸಲು ಸೂಚನೆ ನೀಡಿದ್ದಾರೆ. ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಂದು ಅವಕಾಶ ನೀಡಿದ್ದು, ಈ ತಿಂಗಳ ಕೊನೆ ಅಂದ್ರೆ ಜನವರಿ 31ರವರೆಗೂ ಮತ್ತೊಂದು ಅವಕಾಶ ನೀಡಿದೆ. ಈ ತಿಂಗಳ ಕೊನೆಯೊಳಗೆ ಹಳೆಯ ಗಾಡಿಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಾಗಿದೆ.

2019ಕ್ಕೂ ಮೊದಲು ಖರೀದಿ‌ ಮಾಡಿರುವ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಾಗಿದೆ. ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ 1989 ಸೆಕ್ಷನ್ 50 ಹಾಗೂ 51ರ ಅನ್ವಯ ಎಲ್ಲಾ ವಾಹನಗಳಿಗೂ ಗರಿಷ್ಠ ಭದ್ರತೆಯ ನಂಬರ್ ಪ್ಲೇಟ್ ಗಳನ್ನು ಅಳವಡಿಸಬೇಕಿದೆ. HSRP ಎಂದರೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಎಂದರ್ಥ.

ಈ ಹೈ ಸೆಕ್ಯುರಿಟಿ ಪ್ಲೇಟ್ ಹಾಕಿಸದೆ ಹೋದರೆ ಆ ಗಾಡಿಯನ್ನು ಮಾರುವುದಕ್ಕೆ ಸಾಧ್ಯವಾಗುವುದಿಲ್ಲ. ಮಾಲೀಕತ್ವದ ಬದಲಾವಣೆಯಾಗಲಿ, ವಿಳಾಸ ಬದಲಾವಣೆಯಾಗಲಿ, ನಕಲಿ ಆರ್ಸಿ, ವಿಮೆ ಹಾಗೂ ಇನ್ನಿತರ ಯಾವುದೇ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ರಸ್ತೆಯಲ್ಲಿ ಅಧಿಕೃತವಾಗಿಲ್ಲದ ವಾಹನಗಳು ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. ಹೀಗಾಗಿ ಈ ತಿಂಗಳು ಮುಗಿಯುವುದರೊಳಗೆ ಯಾರೆಲ್ಲಾ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ, ಆದಷ್ಟು ಬೇಗ ಹೊಸ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಿ‌.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment