6ನೇ ವೇತನ ಆಯೋಗ, ಆರೋಗ್ಯ ವಿಮೆ ಜಾರಿಗೆ ಕ್ರಮ:ಶಶಿಕಲಾ ಜೊಲ್ಲೆ

suddionenews
1 Min Read

 

ಬೆಂಗಳೂರು:ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವರು ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ.

ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಪ್ ‌ ಸಚಿವರಾದ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ.

ಇಂದು ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯಲ್ಲಿ ಜಾರಿಗೆ ತಂದ ಹೊಸ ಯೋಜನೆಗಳ ಕುರಿತು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು ನಾನು ಇಲಾಖೆಯ ಜವಾಬ್ದಾರಿ ತೆಗೆದುಕೊಂಡ ಮೇಲೆ ಅವರದ ರಕ್ಷಣೆಗೆ ವಿನೂತನ ವಿಮೆ ಯೋಜನೆ ಜಾರಿಗೊಳಿಸಿದ್ದು, ಅರ್ಚಕರು ಹಾಗೂ ಇಲಾಖೆ ನೌಕರರಿಗೆ ವಿಮೆ ಜಾರಿಗೆ ತರಲು ತೀರ್ಮಾನಿಸಿದ್ದೇನೆ. ಇದರಿಂದ ಮುಜರಾಯಿ ಇಲಾಖೆಯ ಸುಮಾರು 37,000 ಸಿಬ್ಬಂದಿಗೆ ಪ್ರಯೋಜನವಾಗಲಿದೆ ಎಂದು ಸಚಿವರು ಹೇಳಿದರು.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಧಾರ್ಮಿಕ ಸಂಸ್ಥೆಗಳಲ್ಲಿ ಈಗಾಗಲೇ 5 ನೇವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಅರ್ಚಕರಿಗೆ 6ನೇವೇತನ ಆಯೋಗದ ವೇತನ ದೊರಕಿಸಿ ಕೊಡುವಂತೆ ಅರ್ಚಕರಿಂದ ಬಹಳ ದಿನಗಳಿಂದ ಬೇಡಿಕೆ ಇತ್ತು. ನಾನು ಇಲಾಖೆ ಜವಾಬ್ದಾರಿ ವಹಿಸಿಕೊಂಡ ನಂತರ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತ್ವರಿತಗತಿಯಲ್ಲಿ ಅರ್ಚರಿಕರಿಗೆ 6ನೇ ವೇತನ ಆಯೋಗದ ವೇತನ ನೀಡಲು ತೀರ್ಮಾನಿಸಿದ್ದೇನೆ. ಕೆಲವು ಷರತ್ತುಗಳನ್ನು ವಿಧಿಸಿ, ದೇವಾಲಯದ ವಾರ್ಷಿಕ ಆದಾಯದಲ್ಲಿ ನೌಕರರ ವೇತನ ಶೇ35%ರಷ್ಟು ಮೀರದಂತೆ ನೌಕರರನ್ನು 6ನೇವೇತನ ಆಯೋಗದ ವ್ಯಾಪ್ತಿಗೆ ಒಳಪಡುವಂತೆಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *