ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.23 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಪ್ರಸಕ್ತ 2022-23 ನೇ ಸಾಲಿಗೆ ರೂ.728.05 ಲಕ್ಷ ಲಾಭಗಳಿಸಿರುತ್ತದೆ. ಬ್ಯಾಂಕ್ 2022-23 ನೇ ಸಾಲಿಗೆ 509.19 ಕೋಟಿ ಠೇವಣಿ ಸಂಗ್ರಹಣೆ ಮಾಡಿದ್ದು, 56803 ರೈತರಿಗೆ ಶೂನ್ಯ ಬಡ್ಡಿದರದಲ್ಲಿ ರೂ.463.00 ಕೋಟಿ ಅಲ್ಪಾವಧಿ ಬೆಳೆ ಸಾಲ ವಿತರಣೆ ಮಾಡಿದೆ ಎಂದು ಬ್ಯಾಂಕಿನ ಅಧ್ಯಕ್ಷ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ಶ್ರೀರಾಮ ಕಲ್ಯಾಣ ಮಂಟಪದಲ್ಲಿ
ಶನಿವಾರ ನಡೆದ ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ 60 ನೇ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿಯ 7053 ರೈತರಿಗೆ ರೂ.43.93 ಕೋಟಿ ಮತ್ತು ಪರಿಶಿಷ್ಟ ಪಂಗಡದ 7654 ರೈತರಿಗೆ ರೂ.63.68 ಕೋಟಿ ಸಾಲ ವಿತರಿಸಲಾಗಿದೆ. ಹಾಗೂ ಶೇ.3% ಬಡ್ಡಿದರದಲ್ಲಿ 1360 ರೈತರಿಗೆ ರೂ.87.25 ಕೋಟಿ ಭೂ ಅಭಿವೃದ್ದಿ ಮದ್ಯಮಾವಧಿ ಕೃಷಿ ಸಾಲ ವಿತರಿಸಿದೆ. 232.86 ಲಕ್ಷ ಕೃಷಿಯೇತರ ಸಾಲ ವಿತರಿಸಲಾಗಿದೆ. ಬ್ಯಾಂಕ್ 2022-23 ನೇ ಸಾಲಿನಲ್ಲಿ ರೂ.728.05 ಲಕ್ಷ ಲಾಭಗಳಿಸುವುದರ ಮೂಲಕ ಉತ್ತಮ ಸಾಧನೆ ಮಾಡಿರುತ್ತದೆ ಎಂದು ಹೇಳಿದರು.
ಮುಂದಿನ ವರ್ಷದಲ್ಲಿ 10000 ಹೊಸ ರೈತರಿಗೆ ರೂ.48.00 ಕೋಟಿ ಬೆಳೆ ಸಾಲ, 812 ಹೊಸ ರೈತರಿಗೆ ರೂ.76.00 ಕೋಟಿ ಮಧ್ಯಮಾವಧಿ ಸಾಲ ಹಾಗೂ ರೂ.210.00 ಲಕ್ಷ ಕೃಷಿಯೇತರ ಸಾಲಗಳನ್ನು ವಿತರಿಸುವ ಗುರಿ ಹೊಂದಿದ್ದು ರೂ.5.00 ಕೋಟಿ ಲಾಭಗಳಿಸಲು ಗುರಿ ಹಾಕಿಕೊಂಡಿದ್ದು ಪ್ರಗತಿ ಸಾಧಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಹಾಗೂ ರೂ.560.00 ಕೋಟಿ ಠೇವಣಿ ಸಂಗ್ರಹಣೆ ಮಾಡುವ ಗುರಿ ಹೊಂದಿದ್ದು ಇತರೆ ವಾಣಿಜ್ಯ ಹಾಗೂ ಗ್ರಾಮೀಣ ಬ್ಯಾಂಕ್‍ಗಳು ಠೇವಣಿಗಳ ಮೇಲೆ ನೀಡುವ ಬಡ್ಡಿ ದರಕ್ಕಿಂತ ಶೇ.0.50% ರಷ್ಟು ಹೆಚ್ಚಿಗೆ ಬಡ್ಡಿಯನ್ನು ನಮ್ಮ ಬ್ಯಾಂಕಿನಲ್ಲಿ ನೀಡಲಾಗುತ್ತಿದೆ. ಆದ್ದರಿಂದ ಎಲ್ಲ ಸದಸ್ಯರು ಹಾಗೂ ಸಾರ್ವಜನಿಕರು ಬ್ಯಾಂಕಿನಲ್ಲಿ ಠೇವಣಿ ಮಾಡಲು ಕೋರಿದರು. ಆದ್ದರಿಂದ ಸದಸ್ಯರು ಹಾಗೂ ಸಾರ್ವಜನಿಕರು ಇನ್ನೂ ಹೆಚ್ಚು ಠೇವಣಿ ಮಾಡಲು ಕೋರಿದರು. ಜಿಲ್ಲೆಯ ಗ್ರಾಮಾಂತರ ಪ್ರಧೇಶಗಳಲ್ಲಿ ಹೊಸದಾಗಿ ಬ್ಯಾಂಕಿನ 8 ಹೊಸ ಶಾಖೆಗಳನ್ನು ತೆರಯಲು ಆರ್.ಬಿ.ಐ ನಿಂದ ಅನುಮತಿ ಬಂದಿರುತ್ತದೆ. ಶೀಘ್ರದಲ್ಲಿ 8 ಹೊಸ ಶಾಖೆಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ಬ್ಯಾಂಕಿಗೆ ರಾಷ್ಟ್ರೀಯ ಸಹಕಾರ ಸಂಸ್ಥೆಯಾದ NAFSCOB ನಿಂದ 2021-22ನೇ ಸಾಲಿಗೆ ಇಡೀ ರಾಷ್ಟ್ರಕ್ಕೆ 2ನೇ ಉತ್ತಮ ಬ್ಯಾಂಕ್ ಎಂದು ಪ್ರಶಸ್ತಿ ಬಂದಿರುತ್ತದೆ.
ಇದಕ್ಕಾಗಿ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರುಗಳಿಗೆ, ಬ್ಯಾಂಕಿನ ಅಭಿವೃದ್ಧಿಗೆ ಕಾರಣರಾದ ಎಲ್ಲಾ ಸದಸ್ಯ ಸಂಘಗಳಿಗೆ ಹಾಗೂ ಬ್ಯಾಂಕಿನ ಸಿಬ್ಬಂದಿ ವರ್ಗದವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಚಳ್ಳಕೆರೆ ವಿಧಾನ ಸಭೆ ಕ್ಷೇತ್ರದ ಶಾಸಕರು ಹಾಗೂ ಬ್ಯಾಂಕಿನ ನಿರ್ದೇಶಕರಾದ ಟಿ.ರಘುಮೂರ್ತಿಯವರು ಮಾತನಾಡಿ, ಬ್ಯಾಂಕ್ ವರ್ಷದಿಂದ ವರ್ಷಕ್ಕೆ ಅಭಿವೃದ್ದಿಯತ್ತ ಸಾಗುತ್ತಿದ್ದು 8 ವರ್ಷಗಳಿಂದೀಚೆಗೆ ಸತತವಾಗಿ ಲಾಭದಲ್ಲಿ ಮುನ್ನೆಡೆಯುತ್ತಿದೆ. ಬ್ಯಾಂಕಿನಿಂದ ಜಿಲ್ಲೆಯ ರೈತರಿಗೆ ಸುಮಾರು 954.00 ಕೋಟಿ ಸಾಲವನ್ನು ನೀಡಲಾಗಿದೆ. ರೈತರು ಹೆಚ್ಚಿನ ಸಾಲ ಪಡೆದು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಹೆಚ್.ಬಿ.ಮಂಜುನಾಥ್, ವ್ಯವಸ್ಥಾಪಕ ನಿರ್ದೇಶಕರಾದ ಇಲ್ಯಾಸ್ಉಲ್ಲಾ ಷರೀಫ್ ಹಾಗೂ ಬ್ಯಾಂಕಿನ ಎಲ್ಲಾ ಆಡಳಿತ ಮಂಡಳಿ ನಿರ್ದೇಶಕರುಗಳು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…