ಹಿರಿಯೂರಿನಲ್ಲಿ ಭೀಕರ ಅಪಘಾತಕ್ಕೆ 7 ದನಗಳು ಸಾವು..!

1 Min Read

 

ಸುದ್ದಿಒನ್, ಚಿತ್ರದುರ್ಗ, (ಜೂ.23): ದನಗಳನ್ನು ಸಾಗಿಸುತ್ತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಏಳು ದನಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಎನ್.ಹೆಚ್.-4 ರಸ್ತೆಯ ಕೆಆರ್ ಹಳ್ಳಿ ಗೇಟ್ ಬಳಿ ನಡೆದಿದೆ.

ಎರಡು ಲಾರಿಗಳ ಅಪಘಾತವಾದ ರಭಸಕ್ಕೆ ಎರಡು ಲಾರಿಗಳ ಮುಂಭಾಗ ನಜ್ಜು ಗುಜ್ಜಾಗಿದೆ.‌ ಲಾರಿಯಲ್ಲಿದ್ದ ದನಗಳು ರಸ್ತೆಗೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಈ ದೃಶ್ಯ ನೋಡುಗರ ಹೃದಯ ಕಲುಕುವಂತಿತ್ತು. ಇಬ್ಬರು ಡ್ರೈವರ್ ಸ್ಥಿತಿಯೂ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾರಾಷ್ಟ್ರ ದಿಂದ ಕೋಲಾರ ಕಡೆಗೆ ದನಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಮುಂದೆ ಚಲಿಸುತ್ತಿತ್ತು. ಆ ಲಾರಿಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾರಿಯಲ್ಲಿದ್ದ  10 ದನಗಳ ಪೈಕಿ 7 ದನಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 2 ದನಗಳು ಗಂಭೀರವಾಗಿ ಗಾಯಗೊಂಡಿದ್ದು ಉಳಿದ 1 ಗೋವು ಆರೋಗ್ಯವಾಗಿದೆ ಎನ್ನಲಾಗಿದೆ.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *