ಮುಂಬೈ: 20 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಲವರ ಪ್ರಾಣ ಬಲಿ ಪಡೆದ ಘಟನೆ ಮಹಾರಾಷ್ಟ್ರದ ಮುಂಬೈ ನಗರದಲ್ಲಿ ನಡೆದಿದೆ.

ಕಮಲಾ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ, 17 ಮಂದಿಯನ್ನ ರಕ್ಷಿಸಿದ್ದಾರೆ. ಇಂದು ಬೆಳಗ್ಗೆ 7.45ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರ ಗಮನಕ್ಕೆ ಬಂದಿದೆ. ತಕ್ಷಣ ಎಚ್ಚೆತ್ತ ಸ್ಥಳೀಯರು ಅಗ್ನುಶಾಮಕ ಸಿಬ್ಬಂದಿಗೆ ತಿಳಿಸಿದ್ದಾರೆ.
ಬೆಳಗ್ಗೆಯಿಂದಲು ಅಗ್ನುಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಮೊದಲಿಗೆ 18ನೇ ಅಂತಸ್ತಿನಲ್ಲಿ ಬೆಂಕಿ ಹೊತ್ತಿರುವುದು ಕಾಣಿಸಿಕೊಂಡಿದೆ. ಇನ್ನು 17 ಜನರನ್ನ ರಕ್ಷಿಸಲಾಗಿದ್ದು, 6 ಮಂದಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಪೋರ್ಟ್ ನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ನಂದಿಸಿದ್ದಾರೆ.
