ಚಿತ್ರದುರ್ಗ,(ಅ.25): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಎಲ್ಲಾ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಕ್ಕೆ ಮಾಸಿಕ 75 ಯೂನಿಟ್‍ಗಳವರೆಗಿನ ಉಚಿತ ವಿದ್ಯುತ್ ಸೌಲಭ್ಯ ನೀಡುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಆದೇಶದನ್ವಯ ಬೆವಿಕಂ ಹಿರಿಯೂರು ವಿಭಾಗದ ವ್ಯಾಪ್ತಿಗೆ ಒಳಪಡುವ ಹಿರಿಯೂರು, ಚಳ್ಳೆಕರೆ ಮತ್ತು ಮೊಳಕಾಲ್ಮುರು ತಾಲ್ಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಗ್ರಾಹಕರು ರಾಜ್ಯ ಸರ್ಕಾರದ ಯೋಜನೆಯಾದ “ಅಮೃತ ಜ್ಯೋತಿ ಯೋಜನೆ” ಸದುಪಯೋಗ ಪಡಿಸಿಕೊಳ್ಳಲು, ಬೆವಿಕಂ ಉಪವಿಭಾಗ ಕಚೇರಿಗಳಿಗೆ ಅರ್ಜಿ ಮತ್ತು ಇತರೆ ದಾಖಲೆಗಳೊಂದಿಗೆ ಸಂಪರ್ಕಿಸಿ ಯೋಜನೆಯ ಸದುಪಯೋಗ ಪಡೆಯಲು ಕೋರಿದೆ.
ಅರ್ಜಿಯ ಜೊತೆಗೆ ಬಿಪಿಎಲ್ ಕಾರ್ಡ್ (ಆರ್.ಸಿ ಸಂಖ್ಯೆ ಸಹಿತ) ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಆರ್.ಡಿ.ಸಂಖ್ಯೆ ಸಹಿತ) ಜೆರಾಕ್ಸ್ ಪ್ರತಿ, ಬ್ಯಾಂಕ್ ಖಾತೆ ಸಂಖ್ಯೆ,ಐಎಫ್‍ಎಸ್‍ಸಿ ಕೋಡ್ ಇತ್ಯಾದಿ ವಿವರಗಳನ್ನೊಳಗೊಂಡ ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಪ್ರತಿ ಹಾಗೂ ಗ್ರಾಹಕರ ಮೊಬೈಲ್ ಸಂಖ್ಯೆಯೊಂದಿಗೆ ಅರ್ಜಿ ಸಲ್ಲಿಸಬೇಕು. ಈ ಸೌಲಭ್ಯ ಪಡೆಯಲು ಅರ್ಜಿಯನ್ನು ಆನ್‍ಲೈನ್ ಮುಖಾಂತರ ಕರ್ನಾಟಕ ಸರ್ಕಾರದ ಸುವಿಧಾ ವೆಬ್ ಫೋರ್ಟಲ್‍ನಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಿರಿಯೂರು ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಮೊಬೈಲ್ ಸಂಖ್ಯೆ
9448279041, 9449843566,
ಚಳ್ಳಕೆರೆ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೊಬೈಲ್ ಸಂಖ್ಯೆ
9448279042, 9449843565,
ತಳಕು ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಮೊಬೈಲ್ ಸಂಖ್ಯೆ
8277893184, 9449743600 ಹಾಗೂ
ಮೊಳಕಾಲ್ಮುರು ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಮೊಬೈಲ್ ಸಂಖ್ಯೆ
9448279043, 9663662395 ಗೆ
ಸಂಪರ್ಕಿಸಬಹುದು ಎಂದು ಬೆವಿಕಂ ಹಿರಿಯೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.