ಸುದ್ದಿಒನ್, ಚಿತ್ರದುರ್ಗ .ಜ.26. ಸ್ವಾತಂತ್ರ ಹೋರಾಟಗಾರ ತ್ಯಾಗ ಬಲಿದಾನಗಳಿಂದ ಪಡೆದ ಸ್ವಾತಂತ್ರ್ಯವನ್ನು ಪ್ರಜಾಪ್ರಭುತ್ವ ಮಾದರಿಯಲ್ಲಿ ಉಳಿಸಿಕೊಳ್ಳಲು ವ್ಯವಸ್ಥೆಯನ್ನು ರೂಪಿಸಿದ ಈ ದಿನವೇ ಗಣರಾಜ್ಯೋತ್ಸವ. ಅಂತಹ ಸಂವಿಧಾನ ಬದ್ಧ ನೀತಿ ನಿಯಮಗಳಿಗೆ ಆದ್ಯತೆ ನೀಡಿ. ಪ್ರತಿ ಹಂತದಲ್ಲೂ ಸಂವಿಧಾನ ಪೂರ್ವಕವಾಗಿ ನಡೆದುಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು.
ಅದು ಯಾವುದೇ ಕ್ಷೇತ್ರವಿರಲಿ ಹಾಗೆ ನಮ್ಮ ಕಾಲೇಜಿನ ಕರ್ತವ್ಯವನ್ನು ಪ್ರಾಮಾಣಿಕವಾಗಿ ಮಾಡುವ ಪ್ರವೃತ್ತಿ ನಮ್ಮದಾಗಬೇಕೆಂದು ಎಸ್.ಜೆ. ಎಂ ಪಾಲಿಟೆಕ್ನಿಕ್ ನ ಪ್ರಾಚಾರ್ಯರಾದ ಎಸ್. ವಿ.ರವಿಶಂಕರ್ ಅವರು ಅಭಿಪ್ರಾಯಪಟ್ಟರು.
ಅವರು ಕಾಲೇಜಿನ ಪ್ರಾಂಗಣದಲ್ಲಿ ನಡೆದ 75 ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











