ಕೋಲ್ಕತಾ, (ಅ.06) : ಬುಧವಾರ ರಾತ್ರಿ ದುರ್ಗಾ ಮಾತೆಯ ವಿಸರ್ಜನೆ ವೇಳೆ ಪಶ್ಚಿಮ ಬಂಗಾಳದ ಮಾಲ್ ನದಿಗೆ ಹಠಾತ್ ಪ್ರವಾಹ ಅಪ್ಪಳಿಸಿ ಕನಿಷ್ಠ ಎಂಟು ಜನರು ಮುಳುಗಿ ಸಾವನ್ನಪ್ಪಿದ್ದಾರೆ ಮತ್ತು ಹಲವರು ನಾಪತ್ತೆಯಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದ ದಾರುಣ ಘಟನೆಯಲ್ಲಿ ಮೃತಪಟ್ಟವರಲ್ಲಿ ನಾಲ್ವರು ಮಹಿಳೆಯರು ಸೇರಿದ್ದಾರೆ.
ನಿನ್ನೆ ಸಂಜೆ ನದಿಯ ದಡದಲ್ಲಿ ನೂರಾರು ಮಂದಿ ಭಕ್ತರು ದೇವಿ ಮೂರ್ತಿಯನ್ನು ವಿಸರ್ಜನೆ ಮಾಡಲು ಜಮಾಯಿಸಿದ್ದರು.
ಇದ್ದಕ್ಕಿದ್ದಂತೆ, ನೀರು ರಭಸವಾಗಿ ಹರಿದು ಬಂದ ಕಾರಣ 8 ಮಂದಿ ಕೊಚ್ಚಿಹೋದರು. ಅವರ ಎಂಟು ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಸುಮಾರು 50 ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದೇವೆ” ಎಂದು ಅಧಿಕಾರಿಯೋರ್ವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಸಣ್ಣಪುಟ್ಟ ಗಾಯಗಳಾಗಿರುವ 13 ಮಂದಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಶೋಧನೆ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪೊಲೀಸ್ ಮತ್ತು ಸ್ಥಳೀಯ ಆಡಳಿತದ ತಂಡಗಳು ಶೋಧ ಕಾರ್ಯ ನಡೆಸುತ್ತಿವೆ
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…