86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಡಿಸೆಂಬರ್ 10 ಕ್ಕೆ ಚಿತ್ರದುರ್ಗಕ್ಕೆ ಆಗಮಿಸಲಿರುವ  ಕನ್ನಡ ರಥ

1 Min Read

 

ಚಿತ್ರದುರ್ಗ, (ಡಿ.08) :  ಹಾವೇರಿಯಲ್ಲಿ ಜರುಗುತ್ತಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನನಕ್ಕೆ ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥ ಚಿತ್ರದುರ್ಗ ಜಿಲ್ಲೆಯಲ್ಲಿ ಡಿ.10 ರ ಶನಿವಾರ ಮತ್ತು 11 ರಂದು ಭಾನುವಾರ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಚರಿಸಲಿದೆ.

ಹಾವೇರಿಯಲ್ಲಿ ಜ. 6,7 ಮತ್ತು 8 ರಂದು ಸಮ್ಮೇಳನ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕನ್ನಡದ ಜ್ಯೋತಿಯನ್ನು ಹೊತ್ತ ಸ್ವಾಭಿಮಾನದ ಸಂಕೇತವಾದ ಕನ್ನಡ ರಥದ ಜಾಥಾವನ್ನು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದೆ.

ಡಿ. 11 ರಂದು ಭುವನ ಗಿರಿಯಲ್ಲಿರುವ ಕನ್ನಡ ಭುವನೇಶ್ವರಿ ದೇವಾಲಯದಿಂದ ಹೊರಟಿರುವ ಈ ರಥ 11 ಜಿಲ್ಲೆಗಳಲ್ಲಿ ಸಾಗಿ ಚಿತ್ರದುರ್ಗ ಜಿಲ್ಲೆಗೆ ಶನಿವಾರ ಆಗಮಿಸಲಿದೆ.

ಡಿ.10 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಬಳ್ಳಾರಿ ಜಿಲ್ಲೆಯಿಂದ ಮೊಳಕಾಲ್ಮೂರು ಮೂಲಕ ಚಿತ್ರದುರ್ಗ ಜಿಲ್ಲೆಗೆ ಪ್ರವೇಶಿಸಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಮೊಳಕಾಲ್ಮೂರಿನಲ್ಲಿ ರಥಕ್ಕೆ ಸ್ವಾಗತ ಕೋರಲಾಗುವುದು.

ಅದೇ ದಿನ ಮಧ್ಹಾಹ್ನ 3 ಗಂಟೆಗೆ ಚಳ್ಳಕೆರೆ ತಲುಪಲಿದೆ. ಚಳ್ಳಕೆರೆಯಲ್ಲಿ ಸ್ವಾಗತ ಮತ್ತು ಮೆರವಣಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಮೆರವಣಿಗೆಯ ನಂತರ ರಥವು ಚಳ್ಳಕೆರೆಯಲ್ಲಿ ವಾಸ್ತವ್ಯ ಹೂಡಲಿದೆ.

ಮರುದಿನ ಭಾನುವಾರ ಬೆಳಗ್ಗೆ 11 ಕ್ಕೆ ಹಿರಿಯೂರು ತಲುಪಲಿದೆ. ಅಲ್ಲಿ ರಥದ ಪೂಜೆ ನಂತರ ತುಮಕೂರು ಜಿಲ್ಲೆಗೆ ಸಾಗಲಿದೆ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಈ ಕಾರ್ಯಕ್ರಮವನ್ನು ನಿರ್ವಹಿಸಲಿವೆ. ಕನ್ನಡ ಅಭಿಮಾನಿಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

ಕೆ.ಎಂ. ಶಿವಸ್ವಾಮಿ, ಅಧ್ಯಕ್ಷರು.
ಕನ್ನಡ ಸಾಹಿತ್ಯ ಪರಿಷತ್ತು.
ಚಿತ್ರದುರ್ಗ.
9449510078

Share This Article
Leave a Comment

Leave a Reply

Your email address will not be published. Required fields are marked *