Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

87 ನೇ ಕನ್ನಡ ಸಾಹಿತ್ಯ ಸಮ್ಮೇಳನ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ

Facebook
Twitter
Telegram
WhatsApp

 

ಮಂಡ್ಯ ಡಿ.20 :  87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ
ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು.

ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು.

ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಚೆಲುವನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ ಹೆ.ಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್, ಎಂ.ಬಿ‌,ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ :

ಸಕ್ಕರೆ ನಗರಿ ಮಂಡ್ಯದಲ್ಲಿ ನಡೆಯುತ್ತಿರುವ 87 ನೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂತು.

ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾ ರ್ಥಿಗಳು ಸಾಹಿತ್ಯ ಸಮ್ಮೇಳನವನ್ನು ಕಣ್ಮನ ತುಂಬಿಕೊಳ್ಳಲು ತಂಡೋಪ ತಂಡವಾಗಿ ಆಗಮಿಸಿದರು. ರಾಜ್ಯದ ನಾನಾ ಜಿಲ್ಲೆಗಳಿಂದ ಕನ್ನಡಾಭಿಮಾನಿ ಗಳು, ಸಾಹಿತಿಗಳು, ಸಾಹಿತ್ಯಾಸಕ್ತರು ಗುರುವಾರವೇ ನಗರಕ್ಕೆ ಆಗಮಿಸಿದರು.

ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ ಪ್ರತಿನಿಧಿಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದ್ದು, ಸಮ್ಮೇಳನದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು.

ಮೆರವಣಿಗೆಯಲ್ಲಿ ಹಾಗೂ ಮುಖ್ಯವೇದಿಕೆಯಲ್ಲಿ ಜನಸಾಗರ ಜಮಾಯಿಸಿದ್ದ ಕಾರಣ ಹಾಗೂ ಯಾವುದೇ ಅಹಿತಕರ ಘಟನೆ ನಡೆಯಬಾರದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ ಭಾರೀ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಒಟ್ಟು 3,200 ಪೊಲೀಸ್ ಸಿಬ್ಬಂದಿಯನ್ನು ಸಾಹಿತ್ಯ ಸಮ್ಮೇಳನಕ್ಕೆ ನಿಯೋಜಿಸಲಾಗಿದೆ.

ಮಂಡ್ಯ ನಗರದಲ್ಲಿ ನಗರ ಸಾರಿಗೆ ಬಸ್ ಉಚಿತವಾಗಿ ಬಿಟ್ಟಿರುವುದರಿಂದ ನಗರದ ಜನತೆಯೂ ಸಹಸ್ರಾರು ಸಂಖ್ಯೆಯಲ್ಲಿ ಭಾಗವ ಹಿಸಿದರು.

ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯ ಬಹುತೇಕ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರು ವೇದಿಕೆಗೆ ಆಗಮಿಸುತ್ತಿದ್ದಂತೆ ಅಭೂತಪೂರ್ವ ಸ್ವಾಗತ ಕೋರಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೈಲಿಂದ ರಿಲೀಸ್ ಆದ್ಮೇಲೆ ಸಿಟಿ ರವಿ ಸುದ್ದಿಗೋಷ್ಟಿ : ಪೊಲೀಸರ ಬಗ್ಗೆ ಹೇಳಿದ್ದೇನು..?

ದಾವಣಗೆರೆ: ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಕೆಟ್ಟ ಪದ ಬಳಕೆ ಮಾಡಿದ್ದರು ಎಂಬ ಕಾರಣದಿಂದ ಬಿಜೆಪಿ ಎಂಎಲ್ಸಿ ಸಿಟಿ ರವಿ ಅರೆಸ್ಟ್ ಆಗಿದ್ದರು. ಬೆಳಗಾವಿ ನ್ಯಾಯಾಲಯ ಜಾಮೀನು ಅರ್ಜಿ ಕ್ಯಾನ್ಸಲ್ ಮಾಡಿ ಬೆಂಗಳೂರು ಕಾರಾಗೃಹಕ್ಕೆ ಶಿಫ್ಟ್

ನಾಲ್ಕು ದಿನದಿಂದ ಚಿನ್ನದ ದರ ಇಳಿಕೆ..!

ಬೆಂಗಳೂರು: ಚಿನ್ನ ಬೆಳ್ಳಿ ಬೆಲೆಯಲ್ಲಿ ನಿರೀಕ್ಷೆಯಂತೆ ಡಿಸೆಂಬರ್ ತಿಂಗಳಲ್ಲಿ ಇಳಿಕೆಯಾಗುತ್ತಿದೆ‌. ದಿನೇ ದಿನೇ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ನಿನ್ನೆಯೂ ಇಳಿಕೆಯಾಗಿದ್ದ ಚಿನ್ನ ಇಂದು ಕೂಡ ಇಳಿಕೆಯಾಗಿದೆ. ಸುಮಾರು 40 ರೂಪಾಯಿ ಅಷ್ಟು ಇಳಿಕೆಯಾಗಿದೆ. ಒಂದು

ಕಾಂಗ್ರೆಸ್ ಗೂಂಡಾಗಳು ಸಿಟಿ ರವಿ ಮೇಲೆ ಹಲ್ಲೆ‌ ಮಾಡೋಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ : ವಿಜಯೇಂದ್ರ..!

ಬೆಳಗಾವಿ: ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರ ಬಂಧನವನ್ನು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ಹೊರ ಹಾಕಿದ್ದಾರೆ. ಕಾಂಗ್ರೆಸ್ಸಿನ ಗೂಂಡಾಗಳು ಸುವರ್ಣ

error: Content is protected !!