ಹರಿಹರ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಭಾರತೀಯ ಪುರಾತತ್ವ ಇಲಾಖೆ, ತಾಲ್ಲೂಕಾಡಳಿತ, ಧನ್ವಂತರಿ ಪತಂಜಲಿ ಆರೋಗ್ಯ ಕೇಂದ್ರ, ಹರಿಹರದ ಸಪ್ತರ್ಷಿ ಯೋಗ ಸ್ಪೋರ್ಟ್ಸ್ ಅಕಾಡೆಮಿ, ತಪೋವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಇವುಗಳ ಸಂಯುಕ್ತಾಶ್ರಯದಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು “ಮಾನವೀಯತೆಗಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಇಂದು ಮುಂಜಾನೆ ಐತಿಹಾಸಿಕ ಪಾರಂಪರಿಕ ಕ್ಷೇತ್ರ ಹರಿಹರೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಶಾಸಕ ಎಸ್. ರಾಮಪ್ಪ , ತಪೋವನದ ಅಧ್ಯಕ್ಷ ಡಾ. ಶಶಿಕುಮಾರ್ ಮೆರವಾಡೆ ಅವರುಗಳು ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಹರಿಹರದ ಮಾಜಿ ಶಾಸಕ ಬಿ.ಪಿ. ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ನಗರಸಭೆ ಸದಸ್ಯೆ ಶಾಹಿನಾಬಾನು ದಾದಪೀರ್, ಉಪಾಧ್ಯಕ್ಷೆ ವಾಮನಮೂರ್ತಿ ಇದ್ದರು.
ತಪೋವನ ಪ್ರಕೃತಿ ಮತ್ತು ಆಯುರ್ವೇದಿಕ್ ಮೆಡಿಕಲ್ ಕಾಲೇಜು ವತಿಯಿಂದ ಶಾಸಕರು ಸೇರಿದಂತೆ ಮುಖ್ಯ ಅತಿಥಿಗಳಿಗೆ ಸನ್ಮಾನಿಸಿ, ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಹರಿಹರದ ಎಲ್ಲಾ ಇಲಾಖೆಯ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗ , ಹರಿಹರದ ಎಲ್ಲಾ ಯೋಗಾಸಕ್ತರು, ಸಾರ್ವಜನಿಕರು ವಿವಿಧ ಸಂಘ ಸಂಸ್ಥೆಗಳು,ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ನಿರ್ದೇಶಕರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹರಿಹರ.ಹರಿಹರ ತಾಲ್ಲೂಕಿನ ಎಲ್ಲಾ ಆಯುಷ್ ವೈದ್ಯಾಧಿಕಾರಿಗಳು ಹಾಗೂ ಚಿಗಟೇರಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಆಯುಷ್ ವಿಭಾಗದ ಎಲ್ಲ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಎಲ್ಲಾ ಯೋಗಾಸಕ್ತರಿಗೆ ಲಘು ಉಪಾಹಾರದ ವ್ಯವಸ್ಥೆಯನ್ನು ತಪೋವನದ ಸಂಸ್ಥೆಯಿಂದ ಮಾಡಲಾಗಿತ್ತು.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…