Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಹೊಸದಾಗಿ ಮತ್ತೆ 9 ತಾಲೂಕುಗಳು ಬರ ಪಟ್ಟಿಗೆ ಸೇರ್ಪಡೆ : ಒಟ್ಟು ಸಂಖ್ಯೆ 226ಕ್ಕೆ ಏರಿಕೆ

---Advertisement---

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಹೊಸದಾಗಿ 9 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಿ ಆದೇಶ ಹೊರಡಿಸಿದ್ದೇವೆ. ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ತಾಲ್ಲೂಕುಗಳ ಸಂಖ್ಯೆ 226ಕ್ಕೆ ಏರಿಕೆಯಾಗಿದೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಹಾಗೂ ಸಂಕಷ್ಟದಲ್ಲಿರುವ ರೈತರ ಹಿತ ಕಾಪಾಡಲು ನಮ್ಮ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಈಗಾಗಲೇ 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದೆವು. ಇದೀಗ ವೈಜ್ಞಾನಿಕ ಮೌಲ್ಯಮಾಪನ ಹಾಗೂ ಸ್ಥಳ ಪರಿಶೀಲನೆಯ ಆಧಾರದಲ್ಲಿ ಹೊಸದಾಗಿ 9 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಿ ಆದೇಶ ಹೊರಡಿಸಿದ್ದೇವೆ. ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ತಾಲ್ಲೂಕುಗಳ ಸಂಖ್ಯೆ 226ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಹೊಸದಾಗಿ ಘೋಷಿಸಲಾದ ತಾಲ್ಲೂಕುಗಳಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತೀವ್ರ ಬರಪೀಡಿತವಾಗಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ, ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ಸಾಗರ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮೂಡುಬಿದಿರೆ ಮತ್ತು ಮೂಲ್ಕಿ, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಮತ್ತು ದಾಂಡೇಲಿ ಸೇರಿದಂತೆ 8 ತಾಲ್ಲೂಕುಗಳು ಮಧ್ಯಮ ಬರಪೀಡಿತವಾಗಿವೆ ಎಂದು ಹೇಳಿದ್ದರೆ.

ಇನ್ನುಳಿದ ತಾಲೂಕುಗಳಲ್ಲೂ ಬರ ಪರಿಸ್ಥಿತಿಯ ಮೇಲ್ವಿಚಾರಣೆ ಮುಂದುವರಿಯಲಿದ್ದು, ಮಾನದಂಡಗಳಿಗೆ ಒಳಪಟ್ಟಲ್ಲಿ ಮುಂದಿನ ಹಂತದಲ್ಲಿ ಹೆಚ್ಚುವರಿ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗುವುದು ಎಂದರು.

ಬರದಿಂದ ರೈತರ ಜೀವನೋಪಾಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು, ಬೆಳೆಹಾನಿಗೆ ಸೂಕ್ತ ಪರಿಹಾರ ಒದಗಿಸುವುದು ಹಾಗೂ ಗ್ರಾಮೀಣ ಜನರ ಹಿತ ಕಾಯುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ.

Join WhatsApp

Join Now

Join Telegram

Join Now