Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉತ್ತರಕಾಂಡದಲ್ಲಿ ಚಾರಣಕ್ಕೆ ಹೋಗಿದ್ದ ಕರ್ನಾಟಕದ 9 ಜನ ಸಾವು : ಉಳಿದವರನ್ನು ರಕ್ಷಿಸುವ ಭರವಸೆ ನೀಡಿದ ಸಿಎಂ

---Advertisement---

ಕರ್ನಾಟಕದಿಂದ 22 ಮಂದಿ ಉತ್ತರಕಾಶಿಗೆಂದು ಟ್ರೆಕ್ಕಿಂಗ್ ಹೋಗಿದ್ದರು. ಆದರೆ ಈ ವೇಳೆ ಒಂಭತ್ತು ಮಂದಿ ಸಾವನ್ನಪ್ಪಿದ್ದಾರೆ‌. ಹವಮಾನ ವೈಪರೀತ್ಯದಿಂದಾಗಿ ಸಾವನ್ನಪ್ಪಿದ್ದಾರೆ. ಈಗಾಗಲೇ ಆರು ಮಂದಿಯನ್ನು ರಕ್ಚಿಸಲಾಗಿದ್ದು, ಇನ್ನುಳಿದವರ ರಕ್ಚಣೆಯ ಕಾರ್ಯಾಚರಣೆಯೂ ನಡೆಯುತ್ತಿದೆ. ಮೇ, 29 ರಂದು ಉತ್ತರಕಾಶಿಯ ಸಹಸ್ರಾಲ್ ನಿಂದ ಟ್ರೆಕ್ಕಿಂಗ್ ಗೆ ಹೊರಟಿದ್ದರು. ನಿನ್ನೆ ಪ್ರತಿಕೂಲ ಹಮಾಮಾನ ಪರಿಸ್ಥಿತಿಯಿಂದ ಸಾವನ್ನಪ್ಪಿದ್ದಾರೆ.

 

ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಉಳಿದವರನ್ನು ರಕ್ಚಿಸುವ ಭರವಸೆಯನ್ನು ನೀಡಿದ್ದಾರೆ. ‘ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈಗಾಗಲೇ ರಕ್ಷಣಾ ಕಾರ್ಯಾಚರಣೆಯ ಮೂಲಕ 11 ಜನರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಸಚಿವರಾದ @krishnabgowda ಅವರಿಗೆ ಇಂದೇ ಡೆಹ್ರಾಡೂನ್‌ಗೆ ತೆರಳಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸುವಂತೆ ಸೂಚಿಸಿದ್ದೇನೆ. ಸ್ಥಳೀಯವಾಗಿ ಲಭ್ಯವಿರುವ ಹೆಲಿಕಾಪ್ಟರ್‌ಗಳು ಹಾಗೂ ಸೇನಾ ಹೆಲಿಕಾಪ್ಟರ್ ಗಳನ್ನು ಬಳಕೆ ಮಾಡಿಕೊಂಡು ಅಪಾಯದಲ್ಲಿ ಸಿಲುಕಿರುವ ಕನ್ನಡಿಗರನ್ನು ಮರಳಿ ಗೂಡು ಸೇರಿಸಲಾಗುವುದು’ ಎಂದು ಟ್ವೀಟ್ ಮಾಡಿದ್ದಾರೆ.

ಈಗಾಗಲೇ ರಕ್ಷಣಾ‌ಕಾರ್ಯ ಬರದಿಂದ ಸಾಗುತ್ತಿದ್ದು, ರಕ್ಷಿಸಿದವರನ್ನು ಡೆಹ್ರಾಡೂನ್ ಗೆ ಸುರಕ್ಷಿತವಾಗಿ ಕಳುಹಿಸುತ್ತಿದ್ದಾರೆ. ರಾಜ್ಯದ ಸಚಿವರು ಆ ಕಡೆಗೆ ಗಮನ ಹರಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment