Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾವೋವಾದಿಗಳ ದಾಳಿಯಲ್ಲಿ 9 ಯೋಧರು ಹುತಾತ್ಮ…!

---Advertisement---

ಸುದ್ದಿಒನ್: ಛತ್ತೀಸ್‌ಗಢ ಹಿಂಸಾಚಾರದಿಂದ ರಕ್ತಸಿಕ್ತವಾಗಿದೆ. ಇಂದು ನಡೆದ ಮಾವೋವಾದಿಗಳ ದಾಳಿಯಲ್ಲಿ ಒಂಬತ್ತು ಯೋಧರು ಹುತಾತ್ಮರಾಗಿದ್ದಾರೆ. ಛತ್ತೀಸ್‌ಗಢದ ಬಿಜಾಪುರದಲ್ಲಿ ಈ ಭೀಕರ ಘಟನೆ ನಡೆದಿದೆ. ಭದ್ರತಾ ಪಡೆಗಳ ವಾಹನವನ್ನು ಮಾವೋವಾದಿಗಳು ನೆಲಬಾಂಬ್‌ನಿಂದ ಸ್ಫೋಟಿಸಿದ್ದಾರೆ. ಘಟನೆಯಲ್ಲಿ ಒಂಬತ್ತು ಯೋಧರು ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಸುಕ್ಮಾ ಜಿಲ್ಲೆಯ ಕುಟ್ರು ಅರಣ್ಯ ಪ್ರದೇಶದ ಬೇದ್ರೆ-ಕುಟ್ರು ರಸ್ತೆಯಲ್ಲಿ ಮಾವೋವಾದಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ನೆಲಬಾಂಬ್ ಸ್ಫೋಟಕ್ಕೆ 9 ಮಂದಿ ಮೃತರಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರ ಸ್ಥಿತಿ ಗಂಬೀರವಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಸಮಯದಲ್ಲಿ ವ್ಯಾನ್‌ನಲ್ಲಿ 15 ಯೋಧರು ಇದ್ದರು ಎಂದು ತಿಳಿದು ಬಂದಿದೆ.

ಎಂಟು ಮಂದಿ ದಾಂತೇವಾಡ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಯೋಧರು ಮತ್ತು ಒಬ್ಬ ಚಾಲಕ ಸೇರಿದ್ದಾರೆ. ಘಟನೆ ನಡೆದಾಗ ದಾಂತೇವಾಡ, ನಾರಾಯಣಪುರ – ಬಿಜಾಪುರ ಜಿಲ್ಲೆಗಳ ಡಿಆರ್‌ಜಿ ತಂಡಗಳನ್ನು ಒಳಗೊಂಡ ಜಂಟಿ ಕಾರ್ಯಾಚರಣೆಯ ನಂತರ ಸಿಬ್ಬಂದಿ ಹಿಂತಿರುಗುತ್ತಿದ್ದರು ಎಂದು ಬಸ್ತಾರ್ ಐಜಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment