Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನ ಅಂಗವಾಗಿ ‘ಜನನಿ’ ಜನಜಾಗೃತಿ, ಆರೋಗ್ಯ ಶಿಬಿರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ನ. 13 : ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ನಿರ್ದೇಶನದಡಿ ಈ ಬಾರಿಯ ಪ್ರಕೃತಿ ಚಿಕಿತ್ಸಾ ದಿನವನ್ನು ‘ಲೂಸಿಂಗ್ ವೈಟ್ ನ್ಯಾಚುರಲಿ ಥ ನ್ಯಾಚುರೋಪತಿ’ ಧೈಯವಾಕ್ಯದಡಿ, ಅಧಿಕ ದೇಹತೂಕ ಮತ್ತು ಬೊಜ್ಜು ಸಮಸ್ಯೆಗ ನೈಸರ್ಗಿಕ ಪರಿಹಾರಗಳ ಬಗ್ಗೆ ಅರಿವು ಮೂಡಿಸಲು ಆದ್ಯತೆ ನೀಡಲಾಗುವುದು ಎಂದು ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಹಾಗೂ ನಿರ್ದೇಶಕ ಡಾ.ರಾಜೇಶ್ ಪಾದೇಕಲ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಪ್ರಯೋಜನಗಳ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಇಡೀ ಮಧ್ಯ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಉಚಿತ ಆರೋಗ್ಯ ಶಿಬಿರ, ಜಾಗೃತಿ ಜಾಥಾ, ವಿಚಾರ ಸಂಕಿರಣ, ಕಾರ್ಯಾಗಾರ ಮತ್ತು ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಅಂಗವಾಗಿ ಹರಪನಹಳ್ಳಿಯ ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಯುವಜನತೆಯಿಂದ ಹಿಡಿದು ಶ್ರಮಶಕ್ತಿಯ ಕ್ಷಮತೆಯನ್ನೇ ಜೀವನಶೈಲಿ ರೋಗಗಳು ಕ್ಷಯಿಸುತ್ತಿರುವ ಪ್ರಸ್ತುತ ಕಾಲಘಟ್ಟದಲ್ಲಿ, ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುವುದು ಭವಿಷ್ಯದ ದೃಷ್ಟಿಯಿಂದ ಅನಿವಾರ್ಯವಾಗಿದೆ. ಆಧುನಿಕ ವೈದ್ಯವಿಜ್ಞಾನ ರೋಗಚಿಕಿತ್ಸೆಗಿಂತ ರೋಗಗಳು ಬಾಧಿಸದಂತೆ ತಡೆಯುವ ಮುಂಜಾಗ್ರತಾ ಕ್ರಮಗಳಿಗೆ ಒತ್ತು ನೀಡಿದ್ದು, ಸಮಗ್ರ ಸುಕ್ಷೇಮಕ್ಕೆ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವರದಾನವಾಗಿದ್ದು, ಈ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಲಾಗುತ್ತಿದೆ. ಸುಸ್ಥಿರ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಯೋಗ ಮತ್ತು ಪ್ರಕೃತಿ ವಿಜ್ಞಾನ ವಿದೇಶಗಳಲ್ಲೂ ಜನಪ್ರಿಯವಾಗುತ್ತಿದೆ. ಈ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಸಂಸ್ಥೆಯ ಉದ್ದೇಶ ಎಂದು ವಿವರಿಸಿದರು.

ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಮಹೇಶ್ ಮಾತನಾಡಿ, ಮಧ್ಯ ಕರ್ನಾಟಕದಲ್ಲೇ ಪ್ರಥಮ ಎನಿಸಿದ ಅತ್ಯಾಧುನಿಕ ಹಾಗೂ 100 ಹಾಸಿಗೆ ಸೌಲಭ್ಯವಿರುವ ಜನನಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಚ್ಚ ಹಸಿರಿನ ಪ್ರಶಾಂತ ಪರಿಸರದಲ್ಲಿ ಹರಪನಹಳ್ಳಿಯಿಂದ ಕೇವಲ ಒಂಬತ್ತು ಕಿಲೋಮೀಟರ್ ದೂರದ, ಆರೂವರೆ ಎಕರೆ ವಿಶಾಲ ಪ್ರದೇಶದಲ್ಲಿ ವ್ಯಾಪಿಸಿದ್ದು, ಕಲ್ಯಾಣ ಕರ್ನಾಟಕದ ಸಾಮಾಜಿಕ ಸ್ವಾಸ್ಥ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಎನಿಸಲಿದೆ. ಜೀವನಶೈಲಿ ರೋಗಗಳು ಇಂದು ದೇಶದ ಸಾಮಾಜಿಕ ಹಾಗೂ ಆರ್ಥಿಕ ಮುನ್ನಡೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಾಗಿ ಬೆಂಗಳೂರು, ದಕ್ಷಿಣ ಕನ್ನಡದ ಧರ್ಮಸ್ಥಳದಂಥ ದೂರದ ಊರುಗಳಿಗೆ ಹೋಗುವುದು ತಪ್ಪಿ ಈ ಭಾಗದ ಜನತೆಗೆ ಮನೆಬಾಗಿಲಲ್ಲೇ ಈ ಸೇವೆ ಲಭ್ಯವಾಗಲಿದೆ ಎಂದರು.

ಸಮಾಜ ಸೇವಕರಾದ ಸುರೇಶ್ ಬಾಬು (ಸೈಟ್ ಬಾಬಣ್ಣ) ಮಾತನಾಡಿ, ಪ್ರಕೃತಿ ಚಿಕಿತ್ಸೆಯಿಂದ ರೋಗಗಳನ್ನು ಬಾರದಂತೆ ತಡೆಯಬಹುದಾಗಿದೆ, ರೋಗ ಬಂದಾಗ ಚಿಕಿತ್ಸೆ ಪಡೆಯುವುದಕ್ಕಿಂತ ಬಾರದಂತೆ ಎಚ್ಚರವಹಿಸುವುದು ಅಗತ್ಯವಾಗಿದೆ. ಚಿತ್ರದುರ್ಗದ 35 ವಾರ್ಡಗಳಲ್ಲಿಯೂ ಸಹಾ ಈ ಶಿಬಿರವನ್ನು ನಡೆಸುವುದರ ಮೂಲಕ ಜನತೆಯಲ್ಲಿ ಪ್ರಕೃತಿ ಚಿಕಿತಸೆಯ ಬಗ್ಗೆ ಅರಿವನ್ನು ಮೂಡಿಸಲಾಗುವುದೆಂದ ಅವರು ಹೆಚ್ಚಿನ ವಿವರಗಳಿಗೆ: 93530-63097/ 8317363097 ಸಂಪರ್ಕಿಸಬಹುದು

ಗೋಷ್ಟಿಯಲ್ಲಿ ರಾಜೇಶ್ ಹಾಗೂ ಸಂಸ್ಥೆಯ ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕ ವಿಭಾಗದ ಮುಖ್ಯಸ್ಥರಾದ ಉದಯಶಂಕರ ಭಟ್ಟ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...