Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

---Advertisement---

ಬೆಂಗಳೂರು, ನವೆಂಬರ್ 14: ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

114 ವರ್ಷಗಳ ಕಾಲ ಬದುಕಿದ ಸಾಲು ಮರದ ತಿಮ್ಮಕ್ಕನವರು ಇಂದು ದೈವಾಧೀನರಾಗಿದ್ದಾರೆ. ಅವರು ಹುಟ್ಟೂರು ಮಾಗಡಿ ತಾಲ್ಲೂಕು ಹುಲಿಕಲ್ ಗ್ರಾಮ ಜನಿಸಿದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತಿದೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ , ಕೇಂದ್ರಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು ಎಂದರು.

ತಿಮ್ಮಕ್ಕ ಅವರ ಕೊನೆ ಆಸೆ: ಪರಿಶೀಲಿಸಿ ಕ್ರಮ :

ತಿಮ್ಮಕ್ಕ ಅವರ ಕೊನೆ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಿ ಪರಿಗಣಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಕೊಡಲಿ ಎಂದು ಪ್ರಾರ್ಥನೆ ಮಾಡುವುದಾಗಿ ಹೇಳಿದರು.

ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...