Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ನ.16 ರಂದು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಅನ್ನದಾನ ಕಾರ್ಯಕ್ರಮ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ನ. 14 : ‌ಮೆದೇಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 26 ನೇ ವರ್ಷದ  ಅನ್ನದಾನದ ಕಾರ್ಯ ಕ್ರಮದ ಉದ್ಘಾಟನೆಯನ್ನು  ನ.16ರ ಭಾನುವಾರ ಬೆಳಿಗ್ಗೆ 11 ಗಂಟೆಗೆ  ಗಣ ಹೋಮ, ನವಗ್ರಹಹೋಮ, ರುದ್ರಹೋಮ ಮಧ್ಯಾಹ್ನ 12:30 ಗಂಟೆಗೆ ಪೂರ್ಣಾಹುತಿ  ಕಾರ್ಯಕ್ರಮ ನಡೆಯಲಿದೆ ಎಂದು ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್‍ನ ಕಾರ್ಯದರ್ಶಿಗಳಾದ ಎಂ ಪಿ ವೆಂಕಟೇಶ್ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ರಾಜ್ಯ ಬಿ.ಜೆ.ಪಿ ಎಸ್‍ಸಿ ಮೋರ್ಚದ ಉಮೇಶ್ ಗೋವಿಂದ ಕಾರಜೋಳ ಭಾಗವಹಿಸಲಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್‍ನ ಅಧ್ಯಕ್ಷರಾದ ಶರಣ್ ಕುಮಾರ್  ಉಪಸ್ಥಿತರಿರುವರು. ಪ್ರತಿ ವರ್ಷದಂತೆ ಮಾಲೆ ಧರಿಸಿದ ಅಯ್ಯಪ್ಪ ಸ್ವಾಮಿಗಳಿಗೆ ದಿನಾಂಕ 16-11-2025 ರಿಂದ 13-01-2026ವರೆಗೆ60ದಿನಗಳಕಾಲ ಪ್ರತಿನಿತ್ಯ ಉಚಿತ ಅನ್ನದಾನ  ಕಾರ್ಯಕ್ರಮವನ್ನು ನೆರವೇರಿಸಲಾಗುವುದು.

16-12-2025 ರಿಂದ 21-12-2025ರವರೆಗೆ 26ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮ.20-.12-2025 ಶನಿವಾರ ಸಂಜೆ 7ಕ್ಕೆ ಅಯ್ಯಪ್ಪ ಸ್ವಾಮಿ ಪಡಿಪೂಜೆ ಕಾರ್ಯಕ್ರಮ 28-12-2025 ಭಾನುವಾರ ಮಧ್ಯಾಹ್ನ 12 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿ ಮಹಾ ಅನ್ನದಾನ ಕಾರ್ಯಕ್ರಮ 13-.01.-2026 ಮಂಗಳವಾರ ಸಂಜೆ 6 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಯ ಆಭರಣ ಮೆರವಣಿಗೆ 14-1-2026 ಬುಧವಾರ ಸಂಜೆ 6 ಗಂಟೆಗೆ ಮಕರ ಸಂಕ್ರಮಣದ ಅಂಗವಾಗಿ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ವಿಶೇಷವಾದ ಲಕ್ಷ ದೀಪೋತ್ಸವ ಕಾರ್ಯಕ್ರಮ ಇರುತ್ತದೆ .

ಈ ಎಲ್ಲಾ ಪೂಜಾ ಕಾರ್ಯಕ್ರಮಕ್ಕೆ  ಸೇವಾರ್ತಿಗಳು ಹಾಗೂ ಭಕ್ತಾದಿಗಳು ಈ ಮೇಲ್ಕಂಡ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್‍ನ ಅಧ್ಯಕ್ಷರಾದ ಶರಣ್ ಕುಮಾರ್,ಉಪಾಧ್ಯಕ್ಷರಾದ ಮಲ್ಲಿಕಾರ್ಜುನ್. ಹಾಗೂ ಬೆಟ್ಟದ ಮಲ್ಲಪ್ಪ ಕೋರಿದ್ದಾರೆ.  ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷರು 9448664865 ಕಾರ್ಯದರ್ಶಿ 9342310469 ಸಂಪರ್ಕಿಸಬಹುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...