Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಹಾರದಲ್ಲಿ ಎನ್‌ಡಿಎ ಗೆಲುವು : ಚಿತ್ರದುರ್ಗದಲ್ಲಿ ಬಿಜೆಪಿ ಸಂಭ್ರಮಾಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ನ. 14 : ಬಿಹಾರ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೃತ್ರಿ ಪಕ್ಷ ವಿಜಯ ಸಾಧಿಸಿದ್ದ ಹಿನ್ನಲೆಯಲ್ಲಿ ಚಿತ್ರದುರ್ಗ ಬಿಜೆಪಿ ಪಕ್ಷದವತಿಯಿಂದ ನಗರದ ಜಿಲ್ಲಾದಿಕಾರಿಗಳ ಕಚೇರಿಯ ವೃತ್ತದಲ್ಲಿ ವಿಜಯೋತ್ಸವನ್ನು ಆಚರಣೆ ಮಾಡಲಾಯಿತು, ಇಲ್ಲಿ ಪಟಾಕಿಯನ್ನು ಸಿಡಿಸಿ ಸಿಹಿಯನ್ನು ಹಂಚುವುದರ ಮೂಲಕ ಬಿಜೆಪಿ ಪಕ್ಷದ ವಿಜಯೋತ್ಸವನ್ನು ಆಚರಣೆ ಮಾಡಿದರು.

ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಮಾತನಾಡಿ ಕಾಂಗ್ರೆಸ್ ಪಕ್ಷದವರ ಅಪಪ್ರಚಾರ ವೊಟ್‍ಚೂರಿ ಯಂತಹ ಸುಳ್ಳು ಸುದ್ದಿಗಳನ್ನು ಬಿಹಾರದ ಜನತೆ ಕಿವಿಗೊಡಲಿಲ್ಲ  ಕಾಂಗ್ರೆಸ್‍ನವರ ಮುಸ್ಲಿಂ ತೃಷ್ಟೀಕರಣ ನೀತಿಯಿಂದ ಅಲ್ಲಿ ಕಾಂಗ್ರೆಸ್ ನೆಲಕಚ್ಚಿದೆ ಎರಡು ಅಂಕಿಯನ್ನು ಸಹಾ ದಾಟಿಲ್ಲ, ಹೀನಾಯವಾದ ಸೋಲನ್ನು ಅನುಭವಿಸಿದೆ, ದೇಶದ ಜನ ಕಾಂಗ್ರೆಸ್‍ನ್ನು ತಿರಸ್ಕಾರ ಮಾಡಿದ್ದಾರೆ, ಇದು ಬಿಹಾರದಿಂದ ಪ್ರಾರಂಭವಾಗಿದೆ ಅಲ್ಲಿ ಕಾಂಗ್ರೆಸ್ ನ್ನು ಸಂಪೂರ್ಣವಾಗಿ ಧೂಳಿಪಟ ಮಾಡಿದ್ದಾರೆ ಕಾಂಗ್ರೆಸ್ ಮುಂದಿನ ದಿನದಲ್ಲಿ ರಾಜಕಾರಣದಿಂದ ಮೂಲೆ ಗುಂಪಾಗಲಿದೆ ಬಿಹಾರದ ಜನತೆ ಪ್ರಭುದ್ದರಾಗಿದ್ದಾರೆ ಜಿಲ್ಲೆಯ ಜನತೆ ಪರವಾಗಿ ಅಭಿನಂದಿಸುತ್ತೆನೆ ಎಂದು ಹೇಳಿದರು

ಬಿಜೆಪಿಯ ಅಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿ, ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮಾತನಾಡಿದರು

ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಅಧ್ಯಕ್ಷೆ ಶ್ರೀಮತಿ ಸೌಭಾಗ್ಯ ಬಸವರಾಜನ್, ಮುಖಂಡರಾದ ಅನಿತ್ ಕುಮಾರ್, ಹನುಮಂತೇಗೌಡ, ಪ್ರಧಾನ ಕಾರ್ಯದರ್ಶಿ ಸಂಪತ್‍ಕುಮಾರ್, ನವೀನ್ ಚಾಲುಕ್ಯ, ದಗ್ಗೆ ಶಿವಪ್ರಕಾಶ್, ಮಲ್ಲಿಕಾರ್ಜನ್, ಬಸಮ್ಮ ರೇಖಾ, ಶಿವಲೀಲಾ, ಲಿಂಗರಾಜು ಶೀಲ, ಶೈಲೇಶ್ ಕುಮಾರ್, ವಿರೂಪಾಕ್ಷ ಯಾದವ್, ಗ್ರಾಮಾಂತರ ಅಧ್ಯಕ್ಷ ಕೆ.ನಾಗರಾಜ್, ನಗರಾಧ್ಯಕ್ಷ ಲೋಕೇಶ್, ಶಂಭು ಸೋಮೇಂದ್ರ ಸೇರಿದಂತೆ ಇತರರು ಭಾಗವಹಿಸಿದ್ದರು.
 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...