ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಹಿರಿಯೂರು, ನವೆಂಬರ್. 15 : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಘೋಷಿಸಿದ್ದ ಜನವಿರೋಧಿ ಮಹಾಘಟ್ ಬಂಧನ್ ಪಕ್ಷಗಳನ್ನು ಮತದಾರರು ತಿರಸ್ಕರಿಸಿ ನಾವು ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಪರವಾಗಿದ್ದೇವೆಂದು, ಬಿಹಾರ ಜನತೆ ಎನ್.ಡಿಎಗೆ ಮತ್ತೊಮ್ಮೆ ಆಡಳಿತ ನೀಡಿದ್ದಾರೆಂದು ಹಿರಿಯ ಜೆಡಿಎಸ್ ಮುಖಂಡ ಎಂ ರವೀಂದ್ರಪ್ಪ ಹೇಳಿದರು.
ಪತ್ರಿಕಾ ಪ್ರಕಟಣೆ ಮೂಲಕ ಬಿಹಾರ ಚುನಾವಣೆ ಫಲಿತಾಂಶ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಆಡಳಿತ ವೈಖರಿ ಮೆಚ್ಚಿ ಐತಿಹಾಸಿಕ ಗೆಲುವು ನೀಡುವ ಮೂಲಕ ದೇಶದ ಸಮರ್ಥ ನಾಯಕ ಮೋದಿಯೆಂದು ಬಿಹಾರ ಜನತೆ ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ ಎಂದರು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲ. ಬೆಳಗಾವಿಯಲ್ಲಿ ಹೋರಾಟ ಮಾಡಿ ಕಬ್ಬು ಬೆಳೆಗಾರರು ಕಬ್ಬಿಗೆ ಬೆಂಬಲ ಬೆಲೆ ಪಡೆದುಕೊಂಡರು. ಈರುಳ್ಳಿ ಹಾಗೂ ಮೆಕ್ಕೆಜೋಳ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಈರುಳ್ಳಿ ಬೆಳೆದರೂ ಹಾಕಿರುವ ಬಂಡವಾಳ ಕೂಡ ಬರುತ್ತಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ರೈತರ ಸಮಸ್ಯೆಯನ್ನು ಬಗೆಹರಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದರು.
2028ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಹಾರ ಫಲಿತಾಂಶದಂತೆ ರಾಜ್ಯದಲ್ಲಿ ಎನ್.ಡಿಎ ಜಯಭೇರಿ ಬಾರಿಸಲಿದೆ. ಹೈಕಮಾಂಡ್ ತಿರ್ಮಾನದಂತೆ ಮುಂಬರುವ ಸ್ಥಳೀಯ ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ, ಜಿಪಂ ಮತ್ತು ತಾಪಂ ಚುನಾವಣೆಗಳಲ್ಲಿ ಸಮರ್ಥವಾಗಿ ಎದುರಿಸಿ, ಎನ್.ಡಿಎ ಪಕ್ಷಗಳು ಅಧಿಕಾರಕ್ಕೆ ಬರಲು ಹೋರಾಟ ಮಾಡಲಾಗುವುದು ಎಂದರು.
ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ, ಸಿಂಗಲ್ ಸಂಖ್ಯೆಗೆ ಇಳಿಯುವ ಮೂಲಕ ಹೀನಾಯವಾಗಿ ಸೋಲಿಸುವ ಮೂಲಕ ಬಿಹಾರ ಮತದಾರರು ಸರಿಯಾಗಿ ಮುಟ್ಟಿ ನೋಡಿಕೊಳ್ಳುವಂತೆ ಬುದ್ಧಿ ಕಲಿಸಿದ್ದಾರೆ. ಕಾಂಗ್ರೆಸ್ ಧೋರಣೆಯನ್ನು ಜನರು ವಿರೋಧಿಸಿದ್ದು, ದೇಶದಲ್ಲಿ ಎನ್.ಡಿಎ ಅಭಿವೃದ್ಧಿಯ ಅಲೆ ಮುಂದುವರಿದಿದೆ ಎಂದು ತಿಳಿಸಿದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್