ಸುದ್ದಿಒನ್, ಹಿರಿಯೂರು, ನವೆಂಬರ್. 16 : ಸಹಕಾರ ಕ್ಷೇತ್ರದಲ್ಲಿ ಚಿತ್ರದುರ್ಗ ಜಿಲ್ಲೆ ಇನ್ನು ಬಲಿಷ್ಠವಾಗಿ ಬೆಳೆಯಬೇಕು. ನಾವು ಪ್ರತಿ ವರ್ಷ ಪ್ರಗತಿಯತ್ತ ಸಾಗೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಕರೆ ನೀಡಿದರು.
ನಗರದ ಎಪಿಎಂಸಿ ಆವರಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಡಿಸಿಸಿ ಬ್ಯಾಂಕ್, ರಾಜ್ಯ ಕೃಷಿ ಪತ್ತಿನ ಸಹಕಾರ ಸಂಘ, ಪಿ. ಎಲ್.ಡಿ. ಮತ್ತು ಟಿಎಪಿಸಿಎಂಎಸ್, ಸಹಕಾರ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ, ಹಾಲು ಉತ್ಪಾದಕರ ಹಾಗೂ ಕೆಂಪೇಗೌಡ ಪತ್ತಿನ ಸಹಕಾರ ಸಂಘ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ರೈತರು ಮತ್ತು ಸಾಮಾನ್ಯ ಜನರ ಹಿತಕ್ಕಾಗಿ ಸಹಕಾರ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಸಹಕಾರ ಸಂಘಗಳು ರೈತರಿಗೆ ಕಾಲಕಾಲಕ್ಕೆ ಸಾಲ ಸೌಲಭ್ಯ ನೀಡಿ ರೈತರ ಬೆನ್ನೆಲುಬಾಗಿ ನಿಂತಿವೆ. ಸಹಕಾರ ಸಂಸ್ಥೆಗಳು ಬೆಳೆಯುವುದರಿಂದ ರೈತರ ಬದುಕು ಸುಧಾರಣೆಗೊಳ್ಳುತ್ತದೆ ಎಂದು ತಿಳಿಸಿದರು.
ಶಿಮುಲ್ ಹಾಗೂ ಯೂನಿಯನ್ ನಿರ್ದೇಶಕ ಬಿಸಿ ಸಂಜೀವಮೂರ್ತಿ ಮಾತನಾಡಿ ತಾಲೂಕಿನಲ್ಲಿ 65 ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು, ಪ್ರತಿದಿನ 45 ಸಾವಿರ ಲೀಟರ್ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದೆ. ಇದರಿಂದ ಸುಮಾರು 6 ಸಾವಿರ ಕುಟುಂಬಗಳು ಹೈನುಗಾರಿಕೆಯಲ್ಲಿ ತೋಡಗಿಸಿಕೊಂಡಿವೆ. ನಾವು ಶಿಮುಲ್ ಆಡಳಿತಕ್ಕೆ ಬರುವ ಮುನ್ನ ತಾಲೂಕಿನಲ್ಲಿ 54 ಸಂಘಗಳಿದ್ದವು. 11 ನೂತನ ಹಾಲು ಉತ್ಪಾದಕರ ಸಂಘಗಳನ್ನು ಪುನಃ ಹಾಗೂ ಹೊಸದಾಗಿ ಪ್ರಾರಂಭಿಸಿದ್ದು, 100 ಹಾಲು ಉತ್ಪಾದಕರ ಸಂಘಗಳನ್ನು ಸ್ಥಾಪಿಸಲು ಗುರಿ ಹೊಂದಲಾಗಿದೆ. ಹೈನುಗಾರಿಕೆ ಹೆಚ್ಚಿಸಲು ರೈತರಿಗೆ ಹಸು ಕೊಂಡುಕೊಳ್ಳಲು ಕೃಷಿ ಪದ್ಧತಿ ಸಹಕಾರ ಸಂಘಗಳು ಶೂನ್ಯ ದರದಲ್ಲಿ ಸಾಲ ಕೊಡಬೇಕು ಎಂದು ಮನವಿ ಮಾಡಿದರು.
ರಾಜ್ಯ ಸಹಕಾರ ಮಹಾಮಂಡಳ ನಿ, ನಿರ್ದೇಶಕ ಹಾಗೂ ಶ್ರೀ ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ. ಜಗದೀಶ್ ಕಂದಿಕೆರೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ತಾಲೂಕಿನಲ್ಲಿ ಸಹಕಾರ ಸಂಘಗಳ ಸಂಘಟನೆಯ ಹಿತದೃಷ್ಟಿಯಿಂದ ತಾಲ್ಲೂಕು ಸಹಕಾರಿ ಯೂನಿಯನ್ ರಚನೆ ಮಾಡುವುದು ಹಾಗೂ ಮುಂದಿನ ಪರಿಣಾಮಕಾರಿಯಾಗಿ ಸಂಘಟನೆ ರಚಿಸುವ ಉದ್ದೇಶದಿಂದ ತಾಲ್ಲೂಕಿನ 121 ಸಹಕಾರಿಗಳನ್ನು ಸನ್ಮಾನಿಸಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಸಹಕಾರ ನೀಡಲು ಕೋರಿಕೊಂಡರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಜುನಾಥ್ ಮಾಳಿಗೆ, ಶಿಮುಲ್ ನಿರ್ದೇಶಕ ಜಿಬಿ ಶೇಖರಪ್ಪ, ಜಿಲ್ಲಾ ಯೂನಿಯನ್ ಉಪಾಧ್ಯಕ್ಷ ರವಿಕುಮಾರ್, ಸಹಕಾರ ಸಂಘದ ಉಪನಿಬಂಧಕ ದಿಲೀಪ್ ಕುಮಾರ್, ಜಿಲ್ಲಾ ಸಹಕಾರ ಸಂಘಗಳ ಸಹಾಯಕ ನಿಬಂಧಕ ಶಿವಮೂರ್ತಿ, ಯೂನಿಯನ್ ನಿರ್ದೇಶಕ ಈರಲಿಂಗೇಗೌಡ ಇತರರು ಮಾತನಾಡಿದರು. ಉಪನ್ಯಾಸಕಿ ಎಂಕೆ. ಲಕ್ಷ್ಮೀ ಕಾರ್ಯಕ್ರಮ ಕುರಿತು ಉಪನ್ಯಾಸ ನೀಡಿದರು.
ವಾಣಿ ವಿಲಾಸ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆಲೂರು ಹನುಮಂತರಾಯಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ ಸಹಕಾರಿ ಸಂಘಗಳಿಗೆ 125 ವರ್ಷಗಳ ಕಾಲ ಇತಿಹಾಸವಿದೆ. ಜವಲಾಲ್ ನೆಹರೂ ಅವರು ಸಹಕಾರಿ ಕ್ಷೇತ್ರಕ್ಕೆ ಅಪಾರ ಸೇವೆ ನೀಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಸಹಕಾರಿ ಕ್ಷೇತ್ರಕ್ಕೆ ಕೊಡುಗೆ ನೀಡಿದೆ ಎಂದರು.
ಇದೇ ವೇಳೆ ಗಣ್ಯರು, ಸಹಕಾರಿ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಹಿರಿಯ ಸಹಕಾರಿಗಳು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಹರ್ಷ, ನಗರಸಭೆ ಪೌರಾಯುಕ್ತ ಎ ವಾಸೀಂ, ಶ್ರೀ ಕೆಂಪೇಗೌಡ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳಾದ ಶಿವಕುಮಾರ್, ಮಹಾಲಿಂಗಪ್ಪ, ಕೃಷ್ಣಮೂರ್ತಿ, ಅಜಯ್ ಕುಮಾರ್, ಮಾನಸ ಮಂಜುನಾಥ್, ಕಲ್ಪನಾ, ಹಿರಿಯ ಸಹಕಾರಿಗಳಾದ ಎಲ್. ತಿಪ್ಪೇಸ್ವಾಮಿ, ಆಲೂರು ಸಿದ್ದರಾಮಣ್ಣ, ಉಮಾಶಂಕರ್, ಎಂಎಸ್ ರಾಘವೇಂದ್ರ, ಎಸ್. ಜೆ. ಹನುಮಂತರಾಯ, ಕೀರ್ತಿ ಕುಮಾರಿ, ಶಂಕರಮೂರ್ತಿ, ಸಾದತ್ ಉಲ್ಲಾ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳ, ತಾಲ್ಲೂಕಿನ ಕ್ರೆಡಿಟ್ ಸೈಸೋಟಿಗಳು, ಟಿಎಪಿಸಿಎಂಎಸ್, ಪಿಎಲ್.ಡಿ ಬ್ಯಾಂಕ್ ಹಾಗೂ ಸೌಹಾರ್ದ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿಯ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಮಹಿಳಾ ಸಂಪದ ಸದಸ್ಯರು, ಸಿಬ್ಬಂದಿಗಳು ಸೇರಿದಂತೆ ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಸಿಬ್ಬಂದಿಗಳಾದ ಗುರು, ವೆಂಕಟೇಶ್, ಮುರಳಿ, ಈಶ ರೈತ ಉತ್ಪಾದಕ ಸಂಸ್ಥೆ ಅಧ್ಯಕ್ಷೆ ಸರಸ್ವತಿ ಜಗದೀಶ್ ಮತ್ತಿತರರು ಹಾಜರಿದ್ದರು.




