ಧಾರವಾಡ: ಜಿಲ್ಲೆಯ ಸುತ್ತ ಮುತ್ತಲಿನಲ್ಲಿ ಜೆಲಸ ಹುಡುಕುತ್ತಿರುವವರು ಇತ್ತ ಗಮನಿಸಿ. ಧಾರವಾಡ ಕೃಷಿ ವಿಜ್ಞಾನ ವಿವಿಯಲ್ಲಿ ಕೆಲವು ಹುದ್ದೆಗಳು ಖಾಲಿ ಇವೆ. ಸೋಮವಾರ ಬೆಳಗ್ಗೆ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದಾಗಿದೆ.
2 ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳು ಖಾಲಿ ಇದ್ದು, ಜನವರಿ 6 ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಜನವರಿ 21 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ಕರೆಯಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. uasd.edu ಗೆ ಭೇಟಿ ನೀಡಬಹುದು.
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕೃಷಿ ಇಂಜಿನಿಯರಿಂಗ್/ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ, ಫಾರ್ಮ್ ಮೆಷಿನರಿಯಲ್ಲಿ ಸ್ನಾತಕೋತ್ತರ ಪದವಿ ಮತ್ತು ಪವರ್ ಇಂಜಿನಿಯರಿಂಗ್/ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು. ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಯುತ್ತದೆ. 21 ರಂದು ಡೀನ್ ಕಛೇರಿ (ಕೃಷಿ), ಕೃಷಿ ವಿಶ್ವವಿದ್ಯಾಲಯ, ವಿಜಯಪುರ, ಕರ್ನಾಟಕ ಇಲ್ಲಿ ಸಂದರ್ಶನ ನಡೆಯಲಿದೆ.