Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 18 : ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಿಗಷ್ಟೆ ಸೀಮಿತವಾಗಬಾರದು. ಜೀವನದ ಪ್ರತಿ ಕ್ಷಣದಲ್ಲಿಯೂ ಕನ್ನಡ ನಾಡು, ನುಡಿ, ನೆಲ, ಜಲದ ಬಗ್ಗೆ ಮಕ್ಕಳಲ್ಲಿ ಅಭಿಮಾನ ಮೂಡಿಸುವ ಕೆಲಸವಾಗಬೇಕೆಂದು ಡಾ.ಯಶಸ್ವಿನಿ ರೆಡ್ಡಿ ಕೆ.ಬಿ. ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ-13 ಪಿಳ್ಳೆಕೆರನಹಳ್ಳಿಯಲ್ಲಿರುವ ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕನ್ನಡ ಕಲರವ ಉದ್ಗಾಟಿಸಿ ಮಾತನಾಡಿದರು.

ಶಾಲೆಯಲ್ಲಿ ಮಕ್ಕಳು ಹಾಗೂ ಶಿಕ್ಷಕರ ಒಡನಾಟ ಅನ್ಯೋನ್ಯವಾಗಿರಬೇಕು. ಮಕ್ಕಳನ್ನು ಪಠ್ಯಕ್ಕಷ್ಟೆ ಸೀಮಿತಗೊಳಿಸುವ ಬದಲು ಇಂತಹ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ತೊಡಗಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ಪೋಷಕರುಗಳ ಮೇಲಿದೆ ಎಂದು ಹೇಳಿದರು.
ಮಕ್ಕಳ ಸಾಹಿತಿ ಪರಮೇಶ್ವರಪ್ಪ ಕುದುರಿ ಮಾತನಾಡಿ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವದ ಮಹತ್ವ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದರು.

ಬಾಪೂಜಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಸಾಹಿತ್ಯ ಅತ್ಯಂತ ಪ್ರಮುಖವಾದುದು ಎಂದರು.

ಸಂಸ್ಥೆಯ ನಿರ್ದೇಶಕ ಕೆ.ಎಂ.ಚೇತನ್ ಮಾತನಾಡುತ್ತ ಮಕ್ಕಳಲ್ಲಿ ಸಮಯ ಪ್ರಜ್ಞೆ ಹಾಗೂ ಕಲಿಕೆಯಲ್ಲಿ ಸಾಧಿಸುವ ಛಲವಿರಬೇಕು. ಕನ್ನಡ ನಾಡು ನುಡಿ ನೆಲ ಜಲ ಭಾಷೆಯ ಬಗ್ಗೆ ಕನ್ನಡ ರಾಜ್ಯೋತ್ಸವದ ಮೂಲಕ ಪರಿಚಯಿಸಬೇಕೆಂದು ತಿಳಿಸಿದರು.

ಬಾಪೂಜಿ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಮೇಘನಾ ಚೇತನ್, ಎಲ್ಲಾ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now