Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಮನೆ ಬೀಗ ಮುರಿದು 20 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ಕಳ್ಳತನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ನವೆಂಬರ್. 20 : ಜನವಸತಿ ಪ್ರದೇಶದ ವಿಠಲ್ ನಗರದ ಮನೆಯೊಂದರಲ್ಲಿ ಮುಂಭಾಗಲಿನ ಇಂಟರ್ ಲಾಕ್ ಮುರಿದು ಒಳ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಲಕ್ಷ ಮೌಲ್ಯ ಹಣ ಹಾಗೂ ಒಡವೆಗಳನ್ನು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.

ಚಳ್ಳಕೆರೆ ನಗರದ ವಿಠಲ ನಗರದಲ್ಲಿ ಈ ಘಟನೆ ನಡೆದಿದ್ದು ಡ್ರಿಪ್ ಇರಿಗೇಶನ್ ಮಾಲೀಕರಾದ ಮಲ್ಲಿಕಾರ್ಜುನ್ ಇವರ ಮನೆಯಲ್ಲಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ವಿಷಯ ತಿಳಿದಂತೆ ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ಸತ್ಯನಾರಾಯಣರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು, ಪಿಎಸ್ ಐಗಳಾದ ಶಿವರಾಜ್ ಧರಪ್ಪ , ಈರೇಶ ಮತ್ತಿತರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now