ಸುದ್ದಿಒನ್, ಹಿರಿಯೂರು, ನವೆಂಬರ್. 20 : ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸದೆ ಇರುವುದು ರಸ್ತೆ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಅಬ್ಬಿನಹೊಳೆ ಪೊಲೀಸ್ ಠಾಣೆ ಪಿಎಸ್ಐ ದೇವರಾಜ್ ಕಳವಳ ವ್ಯಕ್ತಪಡಿಸಿದರು.
ತಾಲೂಕಿನ ಧರ್ಮಪುರ ಗ್ರಾಮದಲ್ಲಿನ ಸ್ವಾಭಿಮಾನ ವಿದ್ಯಾಸಂಸ್ಥೆಯಲ್ಲಿ ಅಬ್ಬಿನಹೊಳೆ ಠಾಣೆ ವತಿಯಿಂದ ವಿದ್ಯಾರ್ಥಿಗಳಿಗೆ ಗುರುವಾರ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ ಅಂಗವಾಗಿ ರಸ್ತೆ ಅಪಘಾತ ತಡೆಯುವಲ್ಲಿ ಸಾರ್ವಜನಿಕರ ಪಾತ್ರ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ವಾಹನ ಸವಾರರು ನಿಯಮಗಳನ್ನು ಪಾಲಿಸಿದಾಗ ಸುಗಮ ಸಂಚಾರದ ಜೊತೆಗೆ ರಸ್ತೆ ಅಪಘಾತಗಳ ನಿಯಂತ್ರಣ ಸಾಧ್ಯವಾಗುತ್ತದೆ. ಹೆಲ್ಮೆಟ್ , ಸೀಟ್ ಬೆಲ್ಟ್ ಕಡ್ಡಾಯವಾಗಿ ಧರಿಸಬೇಕು. ವಾಹನ ಚಾಲಾಯಿಸುವ ಸಂದರ್ಭ ನಮ್ಮ ಜೀವದ ಜೊತೆ, ಪಾದಚಾರಿ ಮತ್ತು ಎದುರುಗಡೆಯಿಂದ ಬರುವ ಸವಾರರ ಬಗ್ಗೆಯೂ ಜಾಗೃತಿ ಮತ್ತು ಕಾಳಜಿಹಿಸಬೇಕು
ಎಂದರು.

ಪ್ರಬಂಧ ಸ್ಪರ್ಧೆಯಲ್ಲಿ ಚಂದನ ಪ್ರಥಮ, ದ್ವಿತೀಯ ಶಾಂತಲಕ್ಷ್ಮೀ ಹಾಗೂ ನರಸಿಂಹಮೂರ್ತಿ ತೃತೀಯ ಸ್ಥಾನ ಪಡೆದವರಿಗೆ ಬಹುಮಾನ ವಳಪಡೆದುಕೊಂಡರು. ಈ ಸಂದರ್ಭದಲ್ಲಿ ಪ್ರೋ. ಪಿಎಸ್ಐ ಹುಸೇನ್, ಕಾಲೇಜು ಪ್ರಾಂಶುಪಾಲ ರಂಗಸ್ವಾಮಿ, ಉಪನ್ಯಾಸಕರಾದ ವೇದಮೂರ್ತಿ, ಮಹಾಂತೇಶ್, ಮಂಜುಳಾ, ಅಕ್ಷತಾ, ಪೊಲೀಸ್ ಸಿಬ್ಬಂದಿಗಳಾದ ಬಬ್ಬೂರು ನಾಗರಾಜ್, ನಾಗಣ್ಣ ಸೇರಿದಂತೆ ಮತ್ತಿತರರು ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









