Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಕ್ರಮ ಗಣಿಗಾರಿಕೆ ಮೈನಿಂಗ್ ಕಂಪನಿಗಳಿಗೆ ಕಡಿವಾಣ ಹಾಕಿ : ಜೈಭಾರತ್ ರಕ್ಷಣಾ ವೇದಿಕೆ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 21 : ಕಾನೂನು ಮತ್ತು ಷರತ್ತುಗಳನ್ನು ಉಲ್ಲಂಘಿಸಿ ಅದಿರು ಗಣಿಗಾರಿಕೆ ಮೈನಿಂಗ್ ನಡೆಸುತ್ತಿರುವ ಕಂಪನಿಗಳ ಮೇಲೆ ಮತ್ತು ಇದಕ್ಕೆ ಸಂಬಂಧಿಸಿದಂತೆ ಸರ್ಕಾರಿ ಅಧಿಕಾರಿಗಳ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಜೈಭಾರತ್ ರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಗಣಿಗಾರಿಕೆಯಿಂದ ಸುತ್ತಮುತ್ತಲಿನ ಜಮೀನುಗಳಲ್ಲಿ ಬೆಳೆಗಳ ಮೇಲೆ ಧೂಳು ಕೂತು ರೈತರು ನಷ್ಟ ಅನುಭವಿಸುವಂತಾಗಿದೆ. ಜನಸಾಮಾನ್ಯರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದ್ದು, ವಯೋವೃದ್ದರಿಗೆ ಕಣ್ಣಿನ ದೃಷ್ಟಿ ದೋಷವಾಗಿ ಕಾಲರ, ಅಸ್ತಮಾ, ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದಾರೆ. ಹಾಗಾಗಿ ಅಕ್ರಮ ಅದಿರು ಗಣಿಗಾರಿಕೆ ಮೈನಿಂಗ್ ಕಂಪನಿಗಳಿಗೆ ಕಡಿವಾಣ ಹಾಕುವಂತೆ ಜೈಭಾರತ್ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಸ್.ಎನ್.ಮಹಂತೇಶ್ ಜಿಲ್ಲಾಧಿಕಾರಿಯನ್ನು ಆಗ್ರಹಿಸಿದರು. ಜೈಭಾರತ್ ರಕ್ಷಣಾ ವೇದಿಕೆ ಪದಾಧಿಕಾರಿಗಳು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...