ಕಾರು ಅಪಘಾತದಲ್ಲಿ ಹಿರಿಯ IAS ಅಧಿಕಾರಿ ಮಹಂತೇಶ್ ಬೀಳಗಿ‌ ಸಾವು..!

1 Min Read

ಕಲಬುರಗಿ : ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ಮಹಂತೇಶ್ ಬೀಳಗಿ ಅವರ ಕಾರು ಅಪಘಾಗಕ್ಕೀಡಾಗಿದ್ದು, ನಿಧನರಾಗಿದ್ದಾರೆ. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದ್ದು, ಮಹಂತೇಶ್ ಬೀಳಗಿ ಸೇರಿದಂತೆ ಅವರ ಇಬ್ಬರು ಸಹೋದರರು ಸಾವನ್ನಪ್ಪಿದ್ದಾರೆ. ಶಂಕರ್ ಬೀಳಗಿ, ಈರಣ್ಣ ಶಿರಸಂಗಿ ಹಾಗೂ ಮಹಂತೇಶ್ ಬೀಳಗಿ ನಿಧನರಾಗಿದ್ದಾರೆ.

ಮಹಂತೇಶ್ ಬೀಳಗಿ ಅವರು ಈ ಹಿಂದೆ ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆಯಾಗಿದ್ದರು. ಮದುವೆಗೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದರು. ಈ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ.

ಮಹಂತೇಶ್ ಬೀಳಗಿ ಹಾಗೂ ಸಹೋದರರು ಪ್ರಯಾಣಿಸುತ್ತಿದ್ದ ಕಾರಿಗೆ ನಾಯಿ ಅಡ್ಡಬಂದಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ. ಇನ್ನೋವಾ ಕಾರಿನಲ್ಲಿದ್ದವರಿಗೂ ಹೆಚ್ಚು ಪೆಟ್ಟಾಗಿದೆ. ಇದರ ಪರಿಣಾಮ ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ರೆ, ಮಹಂತೇಶ್ ಬೀಳಗಿ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮದುವೆ ಮನೆಗೆ ಖುಷಿ ಖುಷಿಯಾಗಿ ಹೋಗುತ್ತಿದ್ದವರನ್ನು ವಿಧಿ ಮಸಣದೆಡೆಗೆ ಎಳೆದುಕೊಂಡು ಹೋದದ್ದು ದುರಂತವೇ ಸರಿ. ಹಿರಿಯ ಐಎಎಸ್ ಅಧಿಕಾರಿಯನ್ನು ಕಳೆದುಕೊಂಡ ರಾಜ್ಯದ ಜನತೆ ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬಕ್ಕೆ ಈ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮಹಂತೇಶ್ ಅವರನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಬದುಕಬಹುದು ಎಂಬ ನಿರೀಕ್ಷೆ ಸುಳ್ಳಾಗಿದೆ. ಕಾರಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕೊನೆಯುಸಿರೆಳೆದಿದ್ದಾರೆ. ದುರಂತ ಸಾವಿಗೆ ಕುಟುಂಬಸ್ಥರು ಕಣ್ಣೀರಾಕುತ್ತಿದ್ದಾರೆ.

 

Share This Article