Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಮರಕ್ಕೆ ಬಸ್ ಡಿಕ್ಕಿ : 6 ಜನರಿಗೆ ಗಾಯ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್.26 : ಚಾಲಕನ ನಿತಂತ್ರಣ ತಪ್ಪಿ ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾದ ಘಟನೆ ತಾಲ್ಲೂಕಿನ ದಂಡಿನಕುರುಬರಹಟ್ಟಿ ಬಳಿ ಇಂದು ಬೆಳಿಗ್ಗೆ 8:30 ರ ಸುಮಾರಿಗೆ ನಡೆದಿದೆ. ಈ ಅಪಘಾತದಲ್ಲಿ ಆರು‌ ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ.

ಚಳ್ಳಕೆರೆಯಿಂದ ಚಿತ್ರದುರ್ಗದ ಕಡೆಗೆ ಬರುತ್ತಿದ್ದ ಎರಡು ಖಾಸಗಿ ಬಸ್ ಗಳು ದಂಡಿನಕುರುಬರಹಟ್ಟಿ ಸಮೀಪ ಒಂದು ಬಸ್ ಮತ್ತೊಂದು ಬಸ್ಸನ್ನು ಓವರ್ ಟೇಕ್ ಮಾಡುವಾಗ ಬಲಭಾಗದಲ್ಲಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಲ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮಕ್ಕೆ ಬಸ್‍ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜುಗಿದೆ. ಚಾಲಕನ ಕಾಲಿಗೆ ತೀವ್ರವಾಗಿ ಪೆಟ್ಟಾಗಿದೆ. ಸುಮಾರು
ಆರು ಮಂದಿಗೆ ಗಾಯಗಳಾಗಿದ್ದು ಅವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now