Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

10 ಸಾವಿರ ವೈದ್ಯ ವಿದ್ಯಾರ್ಥಿಗಳ ನಿಯೋಜನೆ : ಸಚಿವ ಸುಧಾಕರ್

Facebook
Twitter
Telegram
WhatsApp

ಬೆಂಗಳೂರು: ಕೋವಿಡ್ ಸಮಯದಲ್ಲಿ ಕರ್ನಾಟಕವು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿದ್ದು, ಈವರೆಗೆ ಸುಮಾರು 2.5 ಲಕ್ಷ ಆರೋಗ್ಯ ಸಿಬ್ಬಂದಿಗೆ ತಂತ್ರಜ್ಞಾನದ ಮೂಲಕ ತರಬೇತಿ ನೀಡಲಾಗಿದೆ. ಇದು ಉಳಿದ ರಾಜ್ಯಗಳಿಗೂ ಮಾದರಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸ್ಟೆಪ್ ಒನ್ ಸಂಸ್ಥೆಯ ಸಹಯೋಗದಲ್ಲಿ ಕೋವಿಡ್ ರೋಗಿಗಳ ಮನೆ ಐಸೋಲೇಶನ್ ಗೆ ಸಂಬಂಧಿಸಿದಂತೆ 10,000 ವೈದ್ಯ, ಆಯುಷ್ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈ ಸಮಯದಲ್ಲಿ ಹೋಮ್ ಐಸೋಲೇಶನ್ ನಲ್ಲಿರುವವರ ಆರೋಗ್ಯ ಮೇಲೆ ಹೆಚ್ಚು ನಿಗಾ ಇರಿಸಲಾಗಿದೆ. ಇದಕ್ಕಾಗಿ ಸುಮಾರು 10 ಸಾವಿರ ವೈದ್ಯ ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿದೆ. ಇನ್ನೂ 10 ಸಾವಿರ ಸಿಬ್ಬಂದಿಯನ್ನು ನಿಯೋಜಿಸುವ ಉದ್ದೇಶವಿದೆ. 500 ತಜ್ಞ ವೈದ್ಯರು ಈ ವ್ಯವಸ್ಥೆಗೆ ಬೆಂಬಲ ನೀಡುತ್ತಿದ್ದಾರೆ. ಎರಡನೇ ಅಲೆಯಲ್ಲಿ ರೋಗಿಗಳಿಗೆ 1.33 ಕೋಟಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಲಾಗಿತ್ತು. 42.57 ಲಕ್ಷ ವೈದ್ಯರ ಕನ್ಸಲ್ಟೇಶನ್ ಮಾಡಲಾಗಿತ್ತು. 36 ಸಾವಿರ ರೋಗಿಗಳಿಗೆ ಮಾನಸಿಕ ಆರೋಗ್ಯ ಕೌನ್ಸಿಲಿಂಗ್ ಮಾಡಲಾಗಿದೆ ಎಂದು ವಿವರಿಸಿದರು.

ಅನೇಕ ರೋಗಿಗಳು ಅಗತ್ಯವಿಲ್ಲದಿದ್ದರೂ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದನ್ನು ತಪ್ಪಿಸಿ ಅಗತ್ಯವಿರುವವರಿಗೆ ಹಾಸಿಗೆ ಒದಗಿಸಲು ವೈದ್ಯರ ಸಲಹೆ, ಮಾರ್ಗದರ್ಶನ ಅಗತ್ಯ. ದೂರವಾಣಿ ಕರೆ ಮಾಡಿ ಮಾರ್ಗದರ್ಶನ ನೀಡುವುದರಿಂದ ಅನೇಕರ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!