Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನ.29 ರಂದು ಸಾವಯವ ಕೃಷಿ ತರಬೇತಿ : 50 ರೈತರಿಗೆ ಅವಕಾಶ

---Advertisement---

ಚಿತ್ರದುರ್ಗ. ನ. 26: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ನ.29ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ಕೃಷಿಕರಿಗೆ ಸಾವಯವ ಕೃಷಿ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ತುಮಕೂರಿನ ನಿವೃತ್ತ ಕೃಷಿ ಅಧಿಕಾರಿ ಎಸ್.ರಾಜಶೇಖರಯ್ಯ ಅವರು ಸಾವಯವ ಕೃಷಿಯ ಅವಶ್ಯಕತೆ, ವಿವಿಧ ಸಾವಯವ ಪದ್ಧತಿಗಳು ಹಾಗೂ ಸಾವಯವ ಕೃಷಿಗೆ ಪೂರಕವಾದ ಜೀವಾಮೃತ, ಬೀಜಾಮೃತ, ಘನ ಜೀವಾಮೃತ ಮತ್ತು ವಿವಿಧ ಸಸ್ಯ ಜನ್ಯ ಕೀಟನಾಶಕಗಳ ತಯಾರಿಕೆ ಕುರಿತು ವಿಷಯ ಮಂಡನೆ ಮತ್ತು ಪ್ರಾತ್ಯಕ್ಷಿಕೆ ಮೂಲಕ ತೋರಿಸಿ ಕೊಡಲಿದ್ದಾರೆ.

ಆಸಕ್ತ 50 ಜನ ರೈತ ಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058ಗೆ ಕರೆ ಮಾಡಿ ತರಬೇತಿ ಸದುಪಯೋಗ ಪಡೆಯಬಹುದಾಗಿದೆ.

ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿಯನ್ನು ತರಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now