ಚಿತ್ರದುರ್ಗ. ನ.27: ಚಿತ್ರದುರ್ಗ ನಗರಸಭೆಯ 2026-27ನೇ ಸಾಲಿನ ಆಯ-ವ್ಯಯ ತಯಾರಿ ಬಗ್ಗೆ ಸಾರ್ವಜನಿಕ ಸಲಹಾ ಸೂಚನಾ ಸಭೆಯನ್ನು ನಗರಸಭೆ ಆಡಳಿತಾಧಿಕಾರಿಗಳು, ಪೌರಾಯುಕ್ತರು ಅಧ್ಯಕ್ಷತೆಯಲ್ಲಿ ಇದೇ ನ.28ರಂದು ಮಧ್ಯಾಹ್ನ 1.30ಕ್ಕೆ ನಗರಸಭೆ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ನಗರದ ಗಣ್ಯ ವ್ಯಕ್ತಿಗಳು, ವರ್ತಕರು, ಹಿರಿಯ ನಾಗರೀಕರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ನಿವೃತ್ತ ಅಧಿಕಾರಿ, ನೌಕರರು, ಪತ್ರಕರ್ತರು, ಸಾರ್ವಜನಿಕರು ಆಗಮಿಸಿ ತಮ್ಮ ಸಲಹೆ ಸೂಚನೆಗಳನ್ನು ಲಿಖಿತ ರೂಪದಲ್ಲಿ ನೀಡಬೇಕು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















