Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

12 ಸಾವಿರ ಸರ್ಕಾರಿ.. 6 ಸಾವಿರ ಅನುದಾನಿತ : ಶಿಕ್ಷಕರ ನೇಮಕದ ಬಗ್ಗೆ ಮಧು ಬಂಗಾರಪ್ಪ ಅಪ್ಡೇಟ್

---Advertisement---

ಶಿವಮೊಗ್ಗ: ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿದ್ದರು ಅದಕ್ಕೆ ಬೇಕಾದ ಶಿಕ್ಷಕರ ಸಂಖ್ಯೆ ತೀರಾ ಕಡಿಮೆ ಇರುತ್ತದೆ. ಒಬ್ಬರೇ ಟೀಚರ್ ಎರಡ್ಮೂರು ಸಬ್ಜೆಕ್ಟ್ ಗಳ ಕಡೆಗೆ ಗಮನ ಹರಿಸಬೇಕಾದ ಪರಿಸ್ಥಿತಿಯೂ ಇದೆ. ಇದೀಗ ಆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಶಿಕ್ಷಕರ ನೇಮಕಾತಿಗೆ ಅಸ್ತು ಎಂದಿದೆ.

ಶೀಘ್ರದಲ್ಲಿಯೇ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡುವುದಕ್ಕೆ ತೀರ್ಮಾನ ಮಾಡಲಾಗಿದೆ. ಸರ್ಕಾರಿ ಶಾಲೆಗಳಿಗೆ 12 ಸಾವಿರ ಶಿಕ್ಷಕರು ಹಾಗೇ ಅನುದಾನಿತ ಶಾಲೆಗಳಿಗೆ 6 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿ ಯಾವುದೇ ಶಿಕ್ಷಕರ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು. ಮುಂದಿನ ಶೈಕ್ಷಣಿಕ ವರ್ಚದಲ್ಲಿ ಮಕ್ಕಳ ಸ್ವಾಗತಕ್ಕೆ ಈಗ ನೇಮಕ ಮಾಡಿಕೊಳ್ಳುವ ಶಿಕ್ಷಕರೇ ಉಪಸ್ಥಿತರಿರುತ್ತಾರೆ. ನಾವೂ ಒಟ್ಟು 32 ಸಾವಿರ ಶಿಕ್ಷಕರ ನೇಮಕ ಮಾಡಿದಂತೆ ಆಗುತ್ತದೆ. ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಇಲಾಖೆ ಸಹ ಸಹಕಾರ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಪ್ರಾಂಶುಪಾಲರು, ಉಪಪ್ರಾಂಶುಪಾಲರ ಕಾರ್ಯಾಗಾರ ನಡೆಸಲಾಗುತ್ತಿದೆ. ಶಿಕ್ಷಕರನ್ನು ಸರಿಯಾಗಿ ಇಲಾಖೆ ಬಳಸಿಕೊಳ್ಳುತ್ತಿದೆ. ಅದರಂತೆ ವಿದ್ಯಾರ್ಥಿಗಳಿಗೂ ಕೂಡ ಸರಿಯಾಗಿ ಭೋದನೆ ಮೂಲಕ ಪರೀಕ್ಷೆಗಳನ್ನು ಬರೆಯಲು ಅನುಕೂಲವಾಗುತ್ತಿದೆ. ಯುದ್ಧಕಾಲದಲ್ಲಿ ಶಸ್ತ್ರಭ್ಯಾಸದ ಬದಲು ಈಗಿನಿಂದಲೇ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಪೂರಕವಾಗಿ ತಯಾರಿ ಮಾಡಲಾಗುತ್ತಿದೆ. ಈ ಹಿಂದಿನ ಸರ್ಕಾರದವರು ಕೇವಲ 5 ಸಾವಿರದೊಳಗೆ ಶಿಕ್ಷಕರ ನೇಮಕಾತಿ ಮಾಡಿದ್ರು. ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಕರ ನೇಮಕಾತಿ ಆದಷ್ಟು ಬೇಗನೆ ಮುಗಿಯಲಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now