Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಜಿ. ಎಂ. ಮಲ್ಲಿಕಾರ್ಜುನಪ್ಪನವರ 22 ನೇ ವರ್ಷದ ಪುಣ್ಯ ಸ್ಮರಣೆ : ಕುಟುಂಬ ಸದಸ್ಯರಿಂದ ಪೂಜೆ

---Advertisement---

ಚಿತ್ರದುರ್ಗ, ಸುದ್ದಿಒನ್, ನವೆಂಬರ್. 30 : ತಾಲ್ಲೂಕಿನ ಭೀಮಸಮುದ್ರ ಗ್ರಾಮದಲ್ಲಿಂದು ಜಿ. ಎಂ. ಮಲ್ಲಿಕಾರ್ಜುನಪ್ಪ ಹಾಗೂ ಹಾಲಮ್ಮನವರ ಪುಣ್ಯಸ್ಮರಣೆಯನ್ನು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ದಾವಣಗೆರೆಯ ಮಾಜಿ ಲೋಕಸಭಾ ಸದಸ್ಯರಾದ ಹಾಗೂ ಮಾಜಿ ಕೇಂದ್ರ ಸಚಿವರು ಡಾ. ಜಿ. ಎಂ. ಸಿದ್ದೇಶ್ವರ ಮಾತನಾಡಿ, ನಮ್ಮ ತಂದೆಯವರು ತೀರಿ ಇವತ್ತಿಗೆ 22 ವರ್ಷ. ಪ್ರತಿವರ್ಷದಂತೆ ಈ ವರ್ಷವೂ ಕೂಡ ಗ್ರಾಮದಲ್ಲಿ ಅವರ ಪುಣ್ಯಸ್ಮರಣೆಯನ್ನು ನೆರವೇರಿಸಲಾಯಿತು. ನಮ್ಮ ತಂದೆಯವರ ಹೆಸರಿಗೆ ಚಾರಿಟೇಬಲ್ ಟ್ರಸ್ಟ್ ಮಾಡಿದ್ದು ಅದರಿಂದ ಸಾಕಷ್ಟು ಗ್ರಾಮಗಳಿಗೆ ಶುದ್ದ ಕುಡಿಯುವ ನೀರಿನ ಘಟಕ ಸರ್ಕಾರಿ ಶಾಲೆಗಳಿಗೆ ನೋಟ್ ಬುಕ್ ವಿತರಣೆ ಮಾಡಿದ್ದೇವೆ.

ಚಿತ್ರದುರ್ಗ, ಹರಪನಹಳ್ಳಿ ಹಾಗೂ ಹರಿಹರ ಸರ್ಕಾರಿ ಆಸ್ಪತ್ರೆಗೆ ಆಕ್ಸಿಜನ್ ಪ್ಲಾಂಟ್ ವಿತರಣೆ ಮಾಡಿದ್ದೇವೆ. ನಮ್ಮ ಕಾಲೇಜಿನಲ್ಲಿ ಓದುವ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವನ್ನು ಕೂಡ ನೀಡಿದ್ದೇವೆ. ತಂದೆಯವರ ಸೇವೆ ಶ್ರೀ ಭೀಮೇಶ್ವರ ಪ್ರೌಢಶಾಲೆಯಲ್ಲಿ ಸುಮಾರು 40 ವರ್ಷಗಳ ಕಾಲ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ದಾವಣಗೆರೆಯಲ್ಲಿ ವಿದ್ಯಾ ಸಂಸ್ಥೆಯನ್ನು ಪ್ರಾರಂಭ ಮಾಡಿದರು. ಇವತ್ತು ಸಾವಿರಾರು ಜನ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ತಂದೆಯವರ ಹಾಕಿಕೊಟ್ಟ ದಾರಿ ನಮಗೂ ಹಾಗೂ ನಮ್ಮ ಕುಟುಂಬದವರಿಗೆ ಆಶೀರ್ವಾದವಿದ್ದಂತೆ ಎಂದು ತಿಳಿಸಿದರು.
ಕುಟುಂಬಸ್ಥರೆಲ್ಲ ಸೇರಿ ಬೆಳಗ್ಗೆ ಮಲ್ಲಿಕಾರ್ಜುನಪ್ಪನವರ ಸಮಾಧಿಗೆ ಹೋಗಿ ಪೂಜೆ ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಕುಟುಂಬಸ್ಥರಾದ ಜಿ.ಎಂ. ಸಿದ್ದೇಶ್ವರ್, ಗಾಯತ್ರಿ ಸಿದ್ದೇಶ್ವರ, ಜಿ.ಎನ್. ಪ್ರಸನ್ ಕುಮಾರ್, ಜಿ.ಎಂ. ಲಿಂಗರಾಜು, ಜಿ.ಎಸ್, ಅನಿತ ಕುಮಾರ್ ಕುಟುಂಬಸ್ಥರು ಹಾಗೂ ಹೊಳಲ್ಕೆರೆ ಶಾಸಕ ಚಂದ್ರಪ್ಪ, ಹರಿಹರ ಶಾಸಕ ಬಿ.ಪಿ. ಹರೀಶ್. ಚಿತ್ರದುರ್ಗ MLC ನವೀನ್ ಕುಮಾರ್, ಜಗಳೂರು ಮಾಜಿ ಶಾಸಕರಾದ ಎಚ್. ಪಿ. ರಾಜೇಶ್, ಚನ್ನಗಿರಿ ತುಮಕೂರು ಅಧ್ಯಕ್ಷರಾದ ಶಿವಕುಮಾರ್, ದಾವಣಗೆರೆ ಮಹಾನಗರ ಪಾಲಿಕೆಯ ಮಾಜಿ ಅಧ್ಯಕ್ಷರಾದ ST ವೀರೇಶ್, ಪ್ರಸನ್ನ ಕುಮಾರ್, ಮಾಜಿ ಜಿಲ್ಲಾಧ್ಯಕ್ಷರಾದ ಯಶ್ವಂತ್ ರಾಜ್ ಜಾಧವ್, ಅನಗೋಡಿ ವೀರೇಶ್ ಹಾಗೂ ಮುಖಂಡರುಗಳು ಗ್ರಾಮಸ್ಥರು ಪುಣ್ಯಸ್ಮಣೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...