Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕ್ರೀಡೆಯಿಂದ ಉತ್ತಮ ಆರೋಗ್ಯ : ಫಾತ್ಯಾರಾಜನ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ನ. 30 : ಮಾನವ ಕ್ರೀಡೆಯಿಂದ ಉತ್ತಮವಾದ ಆರೋಗ್ಯವನ್ನು ಪಡೆಯಲು ಸಾಧ್ಯವಿದೆ. ಈ ಹಿನ್ನಲೆಯಲ್ಲಿ ಯಾವುದಾದರೊಂದು ಕ್ರಿಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಚಿತ್ರದುರ್ಗ ಪುಟ್ ಬಾಲ್ ಕ್ಲಬ್‍ನ ಅಧ್ಯಕ್ಷರಾದ ಫಾತ್ಯಾರಾಜನ್ ಕರೆ ನೀಡಿದರು.

ಚಿತ್ರದುರ್ಗ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಚಿತ್ರದುರ್ಗ ಪುಟ್‍ಬಾಲ್ ಕ್ಲಬ್ ವತಿಯಿಂದ ಸೆಟ್ ಟೆಕ್ನಾಲಜಿ ಆಶ್ರಯದಲ್ಲಿ 10,14,16 ವರ್ಷದೊಳಗಿನ ಸೆಟ್ ಪ್ರೀಮೀಯರ್ ಲೀಗ್‍ಪುಟ್‍ಬಾಲ್ ಪಂದ್ಯಾವಳಿ ಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಚಿತ್ರದುರ್ಗದಲ್ಲಿ ವಿವಿಧ ರೀತಿಯ ಕ್ರೀಡೆಗಳು ವರ್ಷ ಪೂರ್ತಿಯಾಗಿ ನಡೆಯುತ್ತವೆ, ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ಪಾಠದ ಜೊತೆಗೆ ಅಟವನ್ನು ಸಹಾ ಆಡುವುದರ ಮೂಲಕ ಮಾನಸಿಕ ಹಾಗೂ ದೈಹಿಕವಾಗಿ ಸದೃಡರಾಗಬೇಕಿದೆ ಎಂದರು.

ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದ ಅಭಿವೃದ್ದಿಗೆ ಸರ್ಕಾರ 27 ಕೋಟಿ ರೂ.ಗಳನ್ನು ನೀಡಿದೆ. ಇದರಲ್ಲಿ 6.50 ಕೋಟಿರೂ.ಗಳನ್ನು ಪುಟ್‍ಬಾಲ್ ಮೈದಾನವನ್ನು ನಿರ್ಮಾಣ ಮಾಡಲು ಅನುಮತಿಯನ್ನು ನೀಡಿದೆ. ಇದರ ಹಿಂದೆ ಅಕ್ರಂರವರ ಹೋರಾಟ ಹೆಚ್ಚಾಗಿದೆ ಅವರು ಕ್ರೀಡಾ ಪ್ರೇಮಿಯಾಗಿದ್ದು ಆಟವನ್ನು ಆಡುವವರಿಗೆ ವಿವಿಧ ರೀತಿಯಲ್ಲಿ ನೆರವನ್ನು ನೀಡುತ್ತಿದ್ದಾರೆ ಎಂದರು.

ಚಿತ್ರದುರ್ಗ ಪುಟ್‍ಬಾಲ್ ಕ್ಲಬ್‍ನ ಉಪಾಧ್ಯಕ್ಷರಾದ ಎನ್.ಡಿ.ಕುಮಾರ್ ಮಾತನಾಡಿ, ಕ್ರೀಡಾಪಟುಗಳನ್ನು ಬೆಳಸುವುದಕ್ಕಾಗಿ ಈ ರೀತಿಯಾದ ಪಂದ್ಯಾವಳಿಯನ್ನು ನಡೆಸಲಾಗುತ್ತದೆ ಇದರಲ್ಲಿ ಭಾಗವಹಿಸುವುದರ ಮೂಲಕ ಮುಂದೆ ಹೆಚ್ಚಿನ ರೀತಿಯಾದ ಪಂದ್ಯಾವಳಿಗಳಲ್ಲಿ ಭಾಗವಹಿಸುವುದರ ಮೂಲಕ ಪದಕಗಳನ್ನು ಗೆಲುವಂತೆ ತಿಳಿಸಿ, ಇಂದಿನ ದಿನಮಾನದಲ್ಲಿ ಕ್ರೀಡೆಗೆ ಉತ್ತೇಜನ ನೀಡುವುದು ಕಡಿಮೆಯಾಗುತ್ತಿದೆ, ಪೋಷಕರು ತಮ್ಮ ಮಕ್ಕಳನ್ನು ಬರೀ ಅಂಕಗಳನ್ನು ಗಳಿಸುವ ಯಂತ್ರಗಳನ್ನಾಗಿ ಮಾಡದೆ ಕ್ರೀಡೆಯಲ್ಲಿ ಬಾಗವಹಿಸುವುದರ ಮೂಲಕ ಉತ್ತಮ ಕ್ರೀಡಾಪಟುಗಳಾಗುವಂತೆ ಕರೆ ನೀಡಿ ವಿದ್ಯಾರ್ಥಿಗಳು ಮೋಬೈಲ್ ಬಳಕೆಯನ್ನು ಕಡಿಮೆ ಮಾಡಿ ಈ ರೀತಿಯಾದ ಕ್ರೀಡೆಯಲ್ಲಿ ಭಾಗವಹಿಸಿ ಎಂದರು.

ಈ ಪಂದ್ಯಾವಳಿಯಲ್ಲಿ ಚಿತ್ರದುರ್ಗ ದಾವಣಗೆರೆ, ಶಿವಮೊಗ್ಗ ಹಾಗೂ ತುಮಕೂರಿನಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಅಕ್ರಂ. ಇಮ್ರಾನ್ ಹುಸೇನ್ರ, ನವಾಜ್, ಸಿದ್ದಿಕ್, ಸೇರಿದಂತೆ ಇತರರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...