Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಟದ ಜೊತೆಗೆ ಪಾಠವೂ ಮುಖ್ಯ : ಮಾದಾರ ಚನ್ನಯ್ಯ ಸ್ವಾಮೀಜಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ನ. 30 :
ದುರ್ಗಾ ಸ್ಪೈಕರ್ಸ್ ವಾಲಿಬಾಲ್ ಕ್ಲಬ್ ಮತ್ತು ವಾಲಿಬಾಲ್ ಅಸೋಸಿಯೇಷನ್ ಅಫ್ ಚಿತ್ರದುರ್ಗ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯೋತ್ಸವ ಕಪ್ 2025ನ್ನು ನಗರದ ಒನಕೆ ಓಬವ್ವ ಕ್ರೀಡಾಂಗಣದ ಮೈದಾನದಲ್ಲಿ ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿಯನ್ನು ಭಾನುವಾರ ಏರ್ಪಡಿಸಲಾಗಿತ್ತು.

ಚಿತ್ರದುರ್ಗ ಜಿಲ್ಲಾ ಮಟ್ಟದ ವಾಲಿಬಾಲ್ ಟೂರ್ನಿಯನ್ನು ಶ್ರೀ ಮಾದಾರ ಚನ್ನಯ್ಯ ಬಸವಮೂರ್ತಿ ಶ್ರೀಗಳು ಸ್ವಾಮೀಜಿ ಉದ್ಘಾಟಿಸಿ ಮಾತನಾಡಿ ಚಿತ್ರದುರ್ಗದಲ್ಲಿ ಕ್ರೀಡೆಗಳು ಕ್ರೀಡಾ ಚಟುವಟಿಕೆಗಳು ಬೆಳೆಯಬೇಕು. ಚಿತ್ರದುರ್ಗದಲ್ಲಿ ವಿವಿಧ ರೀತಿಯ ಕ್ರೀಡೆಗಳು ವರ್ಷ ಪೂರ್ತಿಯಾಗಿ ನಡೆಯುತ್ತವೆ, ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ಪಾಠದ ಜೊತೆಗೆ ಅಟವನ್ನು ಸಹಾ ಆಡುವುದರ ಮೂಲಕ ಮಾನಸಿಕ ಹಾಗೂ ದೈಹಿಕವಾಗಿ ಸದೃಡರಾಗಬೇಕಿದೆ ಎಂದರು.

ಅಂತರಾಷ್ಟ್ರೀಯ ಕ್ರೀಡಾಪಟು ಎನ್.ಡಿ. ಕುಮಾರ್ ಮಾತನಾಡಿ ಕ್ರೀಡೆಗೆ ಯಾವುದೇ ಜಾತಿ ಧರ್ಮ ಭೇದವಿಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ವಾಲಿಬಾಲ್ ಕೋಚ್ ಮಹಿಬುಲ, ಡಿವೈಎಸ್ಪಿ ರಹಮನ್ ಸೋಮಶೇಖರ್, ತಿಮ್ಮಣ್ಣ, ಸಾಧಿಕ್, ನಿಶ್ಚಿತ್, ವೈಶಾಕ್, ತಿಪ್ಪೇಸ್ವಾಮಿ, ಸಿದ್ದೇಶ್, ಮಿಲ್ಟಿ ಶಿವು ಮುಂತಾದವರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...